HomeKarnatakaBIG NEWS: ಬಸ್ ನಲ್ಲಿ ಸೀಟ್ ಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು

BIG NEWS: ಬಸ್ ನಲ್ಲಿ ಸೀಟ್ ಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು

ಬೆಳಗಾವಿ: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿಗೆ ಬಂದಾಗಿನಿಂದ ಬಸ್ ಗಳಲ್ಲಿ ಮಹಿಳಾಮಣಿಗಳದ್ದೇ ದರ್ಬಾರ್. ಸರ್ಕಾರ ಉಚಿತ ಪ್ರಯಾಣವನ್ನು ಘೋಷಿಸಿದರೂ ಮಹಿಳೆಯರು ಸೀಟಿಗಾಗಿ ಹೊಡೆದಾಡಿಕೊಳ್ಳುತ್ತಿದ್ದಾರೆ.

ಬಸ್ ನಲ್ಲಿ ಮಹಿಳೆಯರಿಬ್ಬರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ- ಬೆಳಗಾವಿ ಮಾರ್ಗದ ಬಸ್ ನಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಜಗಳವಾಡಿ ಹೊಡೆದಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಓರ್ವ ಮಹಿಳೆ ಮತ್ತೋರ್ವ ಮಹಿಳೆಗೆ ಚಪ್ಪಲಿಯಲ್ಲಿ ಹೊಡೆದಿದ್ದಾಳೆ. ಮಹಿಳೆ ಚಪ್ಪಲಿಯಲ್ಲಿ ಹೊಡೆಯುತ್ತಿದ್ದಂತೆ ಪುರುಷ ಪ್ರಯಾಣಿಕ ಮಹಿಳೆಯನ್ನು ಥಳಿಸಿದ್ದಾನೆ. ಮಹಿಳೆಯರಿಬ್ಬರೂ ಹೆಡೆದಾಡಿಕೊಂಡಿದ್ದಲ್ಲದೇ ಇಬ್ಬರೂ ಕಿರುಚಾಡಿ ಕಣ್ಣೀರಿಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಉಳಿದ ಪ್ರಯಾಣಿಕರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರ ಹೊಡೆದಾಟದ ವಿಡಿಯೋ ವೈರಲ್ ಆಗಿದೆ.

For Latest News Updates, Join Our Whatsapp Community🚩
RELATED ARTICLES

Most Popular