ಜು. 20 ರಿಂದ ಸಂಸತ್ ಮುಂಗಾರು ಅಧಿವೇಶನ: ನಾಳೆ ಸರ್ವಪಕ್ಷ ಸಭೆ ಕರೆದ ಸರ್ಕಾರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿದ್ದು, ಸರ್ಕಾರ ಬುಧವಾರ ಸರ್ವಪಕ್ಷ ಸಭೆಯನ್ನು ಕರೆದಿದೆ.

ಸಂಸತ್ತಿನ ಅಧಿವೇಶನ ಆರಂಭಕ್ಕೂ ಮುನ್ನ ರೂಢಿಯಲ್ಲಿರುವ ಈ ಸಭೆಯಲ್ಲಿ ಮುಂಗಾರು ಅಧಿವೇಶನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಅಧಿವೇಶನದ ಸುಗಮ ಕಾರ್ಯಾಚರಣೆಗೆ ಸರ್ಕಾರವು ಪ್ರತಿಪಕ್ಷಗಳ ಸಹಕಾರವನ್ನು ಪಡೆಯುವ ನಿರೀಕ್ಷೆಯಿದ್ದರೆ, ಮಣಿಪುರದಲ್ಲಿನ ಹಿಂಸಾಚಾರ, ದೆಹಲಿ ಸುಗ್ರೀವಾಜ್ಞೆ ಮತ್ತು ಇತರ ಹಲವು ವಿಷಯಗಳ ಬಗ್ಗೆ ಪ್ರತಿಭಟನೆಗಳನ್ನು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ನಿರೀಕ್ಷಿಸುತ್ತಿವೆ.

ಏತನ್ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಮಂಗಳವಾರ ಕರೆದಿದ್ದ ಇದೇ ರೀತಿಯ ಸರ್ವಪಕ್ಷ ಸಭೆಯನ್ನು ಹಲವು ಪಕ್ಷಗಳ ನಾಯಕರು ಲಭ್ಯವಿಲ್ಲದ ಕಾರಣ ಮುಂದೂಡಲಾಗಿದೆ.

ಮಂಗಳವಾರ ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಒಕ್ಕೂಟ, ದೆಹಲಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿಕೂಟದ ಸಭೆ ನಡೆದಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read