ಕಾವೇರಿ, ಮೇಕೆದಾಟು ಸೇರಿ ನಾಡಿನ ಹಿತರಕ್ಷಣೆ ‘ಹೋರಾಟ’ಗಾರರ ಮೇಲಿನ ಕೇಸ್ ಹಿಂಪಡೆಯಲು ಕ್ರಮ: ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಕಾವೇರಿ, ಮೇಕೆದಾಟು ಪಾದಯಾತ್ರೆ, ನಾಡಿನ ಹಿತರಕ್ಷಣಾ ಹೋರಾಟದಲ್ಲಿ ಭಾಗವಹಿಸಿದವರ ಮೇಲಿನ ಕೇಸ್ ವಾಪಸ್ ಪಡೆಯಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ.

ಕಾವೇರಿ ಮೇಕೆದಾಟು ಸೇರಿದಂತೆ ನಾಡಿನ ಹಿತರಕ್ಷಣೆ ಹೋರಾಟಗಳಲ್ಲಿ ಭಾಗವಹಿಸಿದ್ದವರ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಶಾಸಕ ದಿನೇಶ್ ಗೂಳಿಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು. ಹೋರಾಟಗಾರರು ನ್ಯಾಯಾಲಯಕ್ಕೆ ಅಲೆದಾಡುವಂತಾಗಿದೆ. ಹೋರಾಟಗಾರರ ಮೇಲೆ ದಾಖಲಿಸಿದ ಪ್ರಕರಣ ಹಿಂಪಡೆಯುವಂತೆ ಅವರು ಕೋರಿದ್ದರು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ನಾಡಿನ ಹಿತ ರಕ್ಷಣೆಯ ಹೋರಾಟದಲ್ಲಿ ಭಾಗಿಯಾದ ಹೋರಾಟಗಾರರ ಮೇಲಿನ ಪ್ರಕರಣಗಳ ಕಡತವನ್ನು ಸಚಿವ ಸಂಪುಟ ಉಪಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಂಡು ಕ್ಯಾಬಿನೆಟ್ ಮುಂದೆ ಇಡುವಂತೆ ಗೃಹ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read