HomeKarnatakaವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಬೇಡಿಕೆಗೆ ಸರ್ಕಾರದ ಅಸ್ತು ಬಗ್ಗೆ ಇಂದೇ...

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಬೇಡಿಕೆಗೆ ಸರ್ಕಾರದ ಅಸ್ತು ಬಗ್ಗೆ ಇಂದೇ ಸಿಎಂ ಪ್ರಸ್ತಾಪ ಸಾಧ್ಯತೆ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಶೇಕಡ 40ರಷ್ಟು ಫಿಟ್ ಮೆಂಟ್ ನೀಡಬೇಕು ಎಂದು ಒತ್ತಾಯಿಸಿ ಮಾರ್ಚ್ 1 ರಿಂದ ಮುಷ್ಕರ ನಡೆಸಲು ಮುಂದಾಗಿರುವುದಾಗಿ ಸರ್ಕಾರಿ ನೌಕರರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ.

ವಿಧಾನಸಭೆ ಚುನಾವಣೆ ಸಮೀಪ ಇರುವಾಗ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಫಿಟ್ ಮೆಂಟ್ ನೀಡಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು, ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವ ಕುರಿತಾಗಿ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸರ್ಕಾರ ಫಿಟ್ ಮೆಂಟ್ ನೀಡಿದಲ್ಲಿ 6 ಲಕ್ಷ ಸರ್ಕಾರಿ ನೌಕರರು, 3 ಲಕ್ಷ ನಿಗಮ, ಮಂಡಳಿ, ಪ್ರಾಧಿಕಾರಗಳ ನೌಕರರು ಹಾಗೂ ಪಿಂಚಣಿ ಪಡೆಯುವ 4.5 ಲಕ್ಷ ನಿವೃತ್ತ ನೌಕರರು ಸೇರಿದಂತೆ ಸುಮಾರು 13.5 ಲಕ್ಷ ಸರ್ಕಾರಿ ನೌಕರರು ನಿವೃತ್ತ ನೌಕರರಿಗೆ ಅನುಕೂಲವಾಗುತ್ತದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸರ್ಕಾರಿ ನೌಕರರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಲು ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಇಂದು ಸಿಎಂ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವಾಗ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular