HomeKarnatakaಹಳೆ ಪಿಂಚಣಿ, ನಗದು ರಹಿತ ಚಿಕಿತ್ಸೆ, 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಸರ್ಕಾರಿ ನೌಕರರ...

ಹಳೆ ಪಿಂಚಣಿ, ನಗದು ರಹಿತ ಚಿಕಿತ್ಸೆ, 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಸರ್ಕಾರಿ ನೌಕರರ ಹಕ್ಕೊತ್ತಾಯ

ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಕ್ಕೊತ್ತಾಯ ಮಂಡಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನ ಆವರಣದಲ್ಲಿ ಶನಿವಾರ ರಾಜ್ಯ ಸರ್ಕಾರ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular