HomeKarnataka7ನೇ ವೇತನ ಆಯೋಗ ವರದಿ ಶೀಘ್ರ ಜಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯ

7ನೇ ವೇತನ ಆಯೋಗ ವರದಿ ಶೀಘ್ರ ಜಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣಿಗೆ ನೇಮಕವಾದ 7ನೇ ವೇತನ ಆಯೋಗದಿಂದ ಶಿಫಾರಸುಗಳನ್ನು ಪಡೆದು ಕೂಡಲೇ ವರದಿ ಜಾರಿಗೆ ತರಬೇಕು ಎಂದು ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿರುವ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಸರ್ಕಾರ ರೂಪಿಸಿದ ಯೋಜನೆಗಳನ್ನು ಜಾರಿಗೆ ತರುವುದೇ ನೌಕರರು. ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಟ್ಟರೆ ಸರ್ಕಾರಕ್ಕೂ ಪ್ರಯೋಜನವಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರಿ ನೌಕರರ ವೇತನಕ್ಕೆ ಹೋಲಿಸಿದರೆ ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ತಾರತಮ್ಯ ಇದೆ. ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ ನೀಡುವ ಸಂದರ್ಭದಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಬಗ್ಗೆ ಸ್ಪಷ್ಟ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular