HomeKarnatakaNPS ರದ್ದು, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ನಿರಾಸೆ: ಹೋರಾಟಕ್ಕೆ ನಿರ್ಧಾರ

NPS ರದ್ದು, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ನಿರಾಸೆ: ಹೋರಾಟಕ್ಕೆ ನಿರ್ಧಾರ

 ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಮರು ಜಾರಿ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದ ಹಿನ್ನೆಲೆಯಲ್ಲಿ ಹೋರಾಟ ನಡೆಸಲು ಸರ್ಕಾರಿ ನೌಕರರು ಮುಂದಾಗಿದ್ದಾರೆ.

ಫೆಬ್ರವರಿ 21 ರಂದು ಸಂಜೆ 5 ಗಂಟೆಗೆ ಕಬ್ಬನ್ ಪಾರ್ಕ್ ನಲ್ಲಿರುವ ನೌಕರರ ಸಂಘದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಸಭೆ ಕರೆಯಲಾಗಿದೆ. ವೇತನ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಮಾಡುವ ಬಗ್ಗೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ಬಜೆಟ್ ನಿರಾಶದಾಯಕವಾಗಿದ್ದು, ಹೋರಾಟ ಅನಿವಾರ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 21 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ವೃಂದ ಸಂಘಗಳ ಅಧ್ಯಕ್ಷರು, ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ನಡೆಸಿ ಮುಂದಿನ ಹೋರಾಟದ ರೂಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular