HomeKarnatakaಸರ್ಕಾರಿ ನೌಕರರಿಗೆ ಶುಭ ಸುದ್ದಿ: ಮೂಲ ವೇತನ ಶೇ 58.5ರಷ್ಟು ಹೆಚ್ಚಳ, ಮನೆ ನಿರ್ಮಾಣ ಮುಂಗಡ...

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ಮೂಲ ವೇತನ ಶೇ 58.5ರಷ್ಟು ಹೆಚ್ಚಳ, ಮನೆ ನಿರ್ಮಾಣ ಮುಂಗಡ 65 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೂಲವೇತನ ಶೇಕಡ 58.5 ರಷ್ಟು ಹೆಚ್ಚಳಕ್ಕೆ 7ನೇ ವೇತನ ಆಯೋಗ ಶಿಫಾರಸು ಮಾಡಿದೆ.

ಆಯೋಗದ ಅಧ್ಯಕ್ಷರಾದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ನೇತೃತ್ವದ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾಗಿ 244 ಪುಟಗಳ ವರದಿ ಸಲ್ಲಿಸಿದೆ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾಗಿದ್ದ 7ನೇ ವೇತನ ಆಯೋಗ ಶೇಕಡ 31 ರಷ್ಟು ಡಿಎ ಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜೊತೆಗೆ ಶೇಕಡ 27.50ರಷ್ಟು ಫಿಟ್ ಮೆಂಟ್ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾರ್ಷಿಕ ವೇತನ ಬಡ್ತಿ ದರ ಕನಿಷ್ಠ 400 ರೂ.ನಿಂದ ಗರಿಷ್ಠ 650ರೂ., ಕನಿಷ್ಠ 3100ರೂ. ನಿಂದ 5000 ರೂ. ಹೆಚ್ಚಳ ಮಾಡಲು ಶಿಫಾರಸು ಮಾಡಲಾಗಿದೆ. ಸಮವಸ್ತ್ರ, ಪ್ರಯಾಣ ಭತ್ಯೆ, ದಿನ ಭತ್ಯೆಗಳನ್ನು ಶೇ. 25 ರಷ್ಟು ಹೆಚ್ಚಳ ಮಾಡಲು ವರದಿಯಲ್ಲಿ ಸಲಹೆ ನೀಡಲಾಗಿದೆ. ಅಂಗವಿಕಲ ಮಕ್ಕಳ ಶೈಕ್ಷಣಿಕ ಭತ್ಯೆ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಹೆಚ್ಚಳ, ಗೃಹ ನಿರ್ಮಾಣ ಮುಂಗಡ 40ಲಕ್ಷ ರೂ.ನಿಂದ 65 ಲಕ್ಷ ರೂ.ವರೆಗೆ ಹೆಚ್ಚಳ, ಗ್ರೂಪ್ ಸಿ, ಡಿ ವೃಂದದ ವೈದ್ಯಕೀಯ ಭತ್ಯೆ 200 ರಿಂದ 500 ರೂಪಾಯಿ ಹೆಚ್ಚಳಕ್ಕೆ ಶಿಫಾರಸು ಮಾಡಲಾಗಿದೆ.

ತಿಂಗಳ ಪಿಂಚಣಿಯನ್ನು ಮೂಲವೇತನದ ಶೇಕಡ 50ರಷ್ಟು, ಕುಟುಂಬ ಪಿಂಚಣಿಯನ್ನು ಶೇಕಡ 30ರಷ್ಟು ಮುಂದುವರೆಸಿದ್ದು, ಪಿಂಚಣಿಯು ಕನಿಷ್ಠ 13500 ರೂ.ನಿಂದ 1.20 ಲಕ್ಷ ರೂ. ವರೆಗೆ ನಿಗದಿ ಮಾಡಲಾಗಿದೆ. 70 ರಿಂದ 80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿ ಶೇಕಡ 10 ರಷ್ಟು ಹೆಚ್ಚಳ ಮಾಡಬೇಕೆಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular