HomeKarnatakaಸರ್ಕಾರಿ ನೌಕರರಿಗೆ ಬಿಗ್ ಶಾಕ್: 7ನೇ ವೇತನ ಆಯೋಗ ವರದಿ ಬಗ್ಗೆ ನಿರ್ಧಾರ ಇಲ್ಲ

ಸರ್ಕಾರಿ ನೌಕರರಿಗೆ ಬಿಗ್ ಶಾಕ್: 7ನೇ ವೇತನ ಆಯೋಗ ವರದಿ ಬಗ್ಗೆ ನಿರ್ಧಾರ ಇಲ್ಲ

ಬೆಂಗಳೂರು: 7ನೇ ವೇತನ ಆಯೋಗದ ವರದಿ ಆಧಾರದ ಮೇಲೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿ ಮಾಡಲು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವಂತೆ ಸರ್ಕಾರಿ ನೌಕರರು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಕೂಡ ಭರವಸೆ ನೀಡಿದ್ದರು. ಆದರೆ, ಸಂಪುಟ ಸಭೆಯಲ್ಲಿ ವೇತನ ಪರಿಷ್ಕರಣೆ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಇದರಿಂದಾಗಿ ಈ ಸಭೆಯಲ್ಲಿ ಆಯೋಗದ ವರದಿ ಶಿಫಾರಸಿನ ಅನ್ವಯ ವೇತನ ಪರಿಷ್ಕರಣೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಸೆಯಾಗಿದೆ. ವೇತನ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಯಾಗಿಲ್ಲವೆಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular