HomeKarnatakaಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

2024ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಷರತ್ತಿಗೆ ಒಳಪಟ್ಟು ಜುಲೈ 9 ರವರೆಗೆ ನಡೆಸಲು ಆಯಾ ಇಲಾಖೆ ಸಚಿವರಿಗೆ ಅಧಿಕಾರ ನೀಡಿ ಜೂನ್ 25ರಂದು ರಾಜ್ಯ ಸರ್ಕಾರ ಆದೇಶಿಸಿತ್ತು. ನೌಕರರ ವರ್ಗಾವಣೆ ದಿನಾಂಕ ವಿಸ್ತರಿಸಬೇಕೆಂದು ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಜುಲೈ 15ಕ್ಕೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಎರಡನೇ ಬಾರಿಗೆ ಪ್ರಸಕ್ತ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular