HomeKarnatakaBIG NEWS: ಸರ್ಕಾರಿ ಆಸ್ಪತ್ರೆ ವೈದ್ಯ ಇದ್ದಕ್ಕಿದ್ದಂತೆ ನಾಪತ್ತೆ

BIG NEWS: ಸರ್ಕಾರಿ ಆಸ್ಪತ್ರೆ ವೈದ್ಯ ಇದ್ದಕ್ಕಿದ್ದಂತೆ ನಾಪತ್ತೆ

ಕಾರವಾರ: ಕರ್ತವ್ಯಕ್ಕೆ ಹೋಗಿಬರುವುದಾಗಿ ಹೇಳಿ ಮನೆಯಿಂದ ಹೊರಟ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.

ಭಟ್ಕಳ ಸರ್ಕಾರಿ ಆಸ್ಪತ್ರೆಯ ಡಾ.ಹೆಚ್.ಟಿ.ಉಮೇಶ್ ನಾಪತ್ತೆಯಾಗಿರುವ ವೈದ್ಯ. ಮೂಲತಃ ನಿಟ್ಟೂರಿನವರಾದ ಉಮೇಶ್ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚರ್ಮರೋಗ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಟ್ಕಳ ಡಿ.ಪಿ.ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅಕ್ಟೋಬರ್ 10ರಂದು ಕರ್ತವ್ಯಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟ ವೈದ್ಯ ಸಂಜೆಯಾದರೂ ಮನೆಗೆ ವಾಪಾಸ್ ಆಗಿಲ್ಲ. ಫೋನ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಮೂರು ದಿನಗಳು ಕಳೆದರೂ ವೈದ್ಯನ ಸುಳಿವಿಲ್ಲ. ಇದರಿಂದ ಕುಟುಂಬದವರು ಆತಂಕಗೊಂಡಿದ್ದಾರೆ.

ಸಂಬಂಧಿಕರ ಮನೆಯಲ್ಲೂ ವಿಚಾರಿಸಿದರೂ ಅಲ್ಲಿಯೂ ಹೋಗಿಲ್ಲ ಎನ್ನಲಾಗಿದೆ. ಕಂಗಾಲಾಗಿರುವ ಕುಟುಂಬ ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular