JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ವಿವಿಧ ಸರ್ಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.

ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದು ಕಾರ್ಯನಿರ್ವಾಹಕ ನಿರ್ದೇಶಕರಾದ ರಮ್ಯಾ ಎಸ್ ಅಧಿಸೂಚನೆ ಹೊರಡಿಸಿದ್ದಾರೆ.

ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭ : ದಿನಾಂಕ-23-06-2023
ಇ-ಅಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿ -26-06-2023 ಬೆಳಗ್ಗೆ 11 ರಿಂದ
ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-07-2023
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ -25-07-2023
ಹುದ್ದೆ, ವೇತನ , ಅರ್ಜಿ ಸಲ್ಲಿಕೆ ಸಂಬಂಧ ಇಲ್ಲಿದೆ ಸಂಪೂರ್ಣ ಮಾಹಿತಿ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read