HomeKarnatakaBIG NEWS: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ

BIG NEWS: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಕೊರೋನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಮೃತರಾದವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ನಾವು ಭರವಸೆ ನೀಡಿದ್ದೆವು. ಈ ಬಗ್ಗೆ ಏನಾದರೂ ಬೆಳವಣಿಗೆ ಆಗಿದೆಯೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉತ್ತರ ನೀಡಿ, 32 ಮಂದಿಗೆ ಕಾಯಂ ಉದ್ಯೋಗ ಕೊಡುವ ನಿಟ್ಟಿನಲ್ಲಿ ಅವರ ವಿದ್ಯಾರ್ಹತೆ ಪಡೆದುಕೊಂಡಿದ್ದು, ಉದ್ಯೋಗಗಳು ಎಲ್ಲಿ ಖಾಲಿ ಇವೆ ಎಂಬ ಮಾಹಿತಿ ಪಡೆದಿದ್ದೇವೆ. ಪ್ರಸ್ತಾವನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯುವ ಅಗತ್ಯವಿದ್ದು, ಪ್ರಸ್ತಾವನೆ ಕಳುಹಿಸುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular