HomeIndiaಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: 1 ಲಕ್ಷ ರೂ. ಗಳಿಸಲು 'ಸಂಘಟನ್ ಸೇ ಸಮೃದ್ಧಿ' ಯೋಜನೆಗೆ...

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: 1 ಲಕ್ಷ ರೂ. ಗಳಿಸಲು ‘ಸಂಘಟನ್ ಸೇ ಸಮೃದ್ಧಿ’ ಯೋಜನೆಗೆ ಚಾಲನೆ

ನವದೆಹಲಿ: ಗ್ರಾಮೀಣ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಜಾಲಕ್ಕೆ ತರಲು ಸರ್ಕಾರವು ‘ಸಂಘಟನ್ ಸೇ ಸಮೃದ್ಧಿ’ ಯೋಜನೆ ಪ್ರಾರಂಭಿಸಿದೆ

ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್‌ ಸಿಂಗ್‌ ಅವರು ‘ಸಂಘಟನ್‌ ಸೇ ಸಮೃದ್ಧಿ’ ಅಭಿಯಾನಕ್ಕೆ ಇಂದು ಚಾಲನೆ ನೀಡಿದರು. ಇದು ಎಲ್ಲಾ ಅರ್ಹ ಗ್ರಾಮೀಣ ಮಹಿಳೆಯರನ್ನು ಸ್ವಸಹಾಯ ಗುಂಪುಗಳ(SHGs) ಪಟ್ಟುಗಳಿಗೆ ತರುವ ಮೂಲಕ ಅಂಚಿನಲ್ಲಿರುವ ಗ್ರಾಮೀಣ ಕುಟುಂಬಗಳನ್ನು ಸಬಲಗೊಳಿಸುತ್ತದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈಗಿರುವ 10 ಕೋಟಿ ಮಹಿಳೆಯರನ್ನು ಸ್ವಸಹಾಯ ಸಂಘಗಳ ವ್ಯಾಪ್ತಿಗೆ ತರುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 2014ರಲ್ಲಿ ಕೇವಲ 2.35 ಕೋಟಿ ಇದ್ದ ಸದಸ್ಯರ ಸಂಖ್ಯೆ ಈಗ 9 ಕೋಟಿ ದಾಟಿದೆ. ಸ್ವಸಹಾಯ ಸಂಘಗಳಿಗೆ ಸಂಬಂಧಿಸಿದ ಪ್ರತಿಯೊಬ್ಬ ಮಹಿಳೆಯು ವರ್ಷಕ್ಕೆ ಒಂದು ಲಕ್ಷ ರೂಪಾಯಿಗಳನ್ನು ಗಳಿಸಬೇಕು ಎಂಬ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular