HomeLatest Newsಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆಗೆ ನಿರ್ಬಂಧ: ಕಾರ್ಯಕ್ರಮ-ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಆದೇಶ

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆಗೆ ನಿರ್ಬಂಧ: ಕಾರ್ಯಕ್ರಮ-ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸುವಂತಿಲ್ಲ. ಪರಿಸರ ಸ್ನೇಹಿ ಪರಿಕರಗಳನ್ನು ಮಾತ್ರ ಬಳಸಬೇಕು. ಮಾತ್ರವಲ್ಲ ಯಾವುದೇ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಕೆ.ಎಂ.ಎಫ್ ನಂದಿನಿ ಉತ್ಪನ್ನಗಳನ್ನೇ ಬಳಸುವಂತೆ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ದೃಷ್ಟಿಯಿಂದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಆದೇಶ ನೀಡಲಾಗಿದೆ.

ಅಲ್ಲದೇ ಕರ್ನಾಟಕ ಸರ್ಕಾರದ ಎಲ್ಲಾ ಕಾರ್ಯಕ್ರಮಗಳು, ಕಚೇರಿಗಳ ಸಭೆ, ಸಮಾರಂಭಗಳಲ್ಲಿ ಕರ್ನಾಟಕ ಮಿಲ್ಕ್ ಫೆಡರೇಶನ್ (KMF) ನ ನಂದಿನಿ ತಿನಿಸುಗಳನ್ನು ಬಳಸುವಂತೆ ನಿರ್ದೇಶನ ನೀಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ ಎಲ್ಲಾ ಇಲಾಖೆ ಹಾಗೂ ಕಚೇರಿಗಳಿಗೆ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular