HomeKarnatakaBIG NEWS: ಸರ್ಕಾರಿ ವೈದ್ಯರೆಲ್ಲ ಕನ್ನಡದಲ್ಲೇ ಔಷಧ ಚೀಟಿ ಬರೆದು ಕೊಡಲು ಆದೇಶ ಹೊರಡಿಸಿ: ಆರೋಗ್ಯ...

BIG NEWS: ಸರ್ಕಾರಿ ವೈದ್ಯರೆಲ್ಲ ಕನ್ನಡದಲ್ಲೇ ಔಷಧ ಚೀಟಿ ಬರೆದು ಕೊಡಲು ಆದೇಶ ಹೊರಡಿಸಿ: ಆರೋಗ್ಯ ಸಚಿವರಿಗೆ ಮನವಿ

ಬೆಂಗಳೂರು: ಸರ್ಕಾರಿ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಆದೇಶ ಮಾಡುವಂತೆ ಆರೋಗ್ಯ ಸಚಿವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮನವಿ ಮಾಡಿದ್ದಾರೆ.

ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸರ್ಕಾರಿ ವೈದ್ಯರೆಲ್ಲ ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಆದೇಶಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೂಡಲೇ ಸರ್ಕಾರ ಆದೇಶ ಜಾರಿ ಮಾಡಬೇಕು ಎಂದು ಕೋರಿ ಆರೋಗ್ಯ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಾದ್ಯಂತ ಇರುವ ನೂರಾರು ಕನ್ನಡಪ್ರಿಯ ವೈದ್ಯರು ರೋಗಿಯ ಹೆಸರನ್ನು ಕನ್ನಡದಲ್ಲಿಯೇ ಬರೆಯುವುದಾಗಿ ತಿಳಿಸುತ್ತಿದ್ದಾರೆ. ಕೆಲವರು ಮದ್ದಿನ ಹೆಸರನ್ನೂ ಕನ್ನಡದಲ್ಲಿ ಬರೆಯುತ್ತಿದ್ದಾರೆ.‌ ಕನ್ನಡ ಬೆಳೆಯುವ ಒಂದು ಹಾದಿ ಇದೀಗ ತೆರೆದುಕೊಂಡಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular