HomeBusinessಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ಸುದ್ದಿ: 2 ಯೋಜನೆಗಳ ಬಡ್ಡಿದರ ಹೆಚ್ಚಳ

ಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ಸುದ್ದಿ: 2 ಯೋಜನೆಗಳ ಬಡ್ಡಿದರ ಹೆಚ್ಚಳ

ನವದೆಹಲಿ: 2024 ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಅನ್ವಯವಾಗುವ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಸರ್ಕಾರ ಶುಕ್ರವಾರ ಪ್ರಕಟಿಸಿದೆ.

ಡಿಸೆಂಬರ್ 29, 2023 ರ ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ ಮಾರ್ಚ್ 31, 2024 ರಂತೆ, ಆಯ್ದ ಸಣ್ಣ ಉಳಿತಾಯ ಯೋಜನೆಗಳು ಮತ್ತು ಪೋಸ್ಟ್ ಆಫೀಸ್ ಯೋಜನೆಗಳ ಬಡ್ಡಿದರಗಳಲ್ಲಿ ಹೆಚ್ಚಳ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕ ಭವಿಷ್ಯ ನಿಧಿಯ(PPF) ಬಡ್ಡಿ ದರವು 7.1 ಶೇಕಡಾದಲ್ಲಿ ಸ್ಥಿರವಾಗಿರುತ್ತದೆ.

ಸುಕನ್ಯಾ ಸಮೃದ್ಧಿ ಖಾತೆ ಯೋಜನೆಗೆ ಬಡ್ಡಿದರದಲ್ಲಿ 20 ಬೇಸಿಸ್ ಪಾಯಿಂಟ್‌ಗಳ ಹೆಚ್ಚಳ ಮಾಡಲಾಗಿದೆ. ಜನವರಿ-ಮಾರ್ಚ್ 2024 ರ ಅವಧಿಗೆ ಶೇ. 8.2 ಬಡ್ಡಿದರ ಇರಲಿದೆ, ಎಲ್ಲಾ ಇತರ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ನೀಡಲಾದ ದರಗಳಿಗಿಂತ ಬದಲಾಗದೆ ಉಳಿಯುತ್ತವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular