HomeKarnatakaBIG NEWS: ರಾಜ್ಯದಲ್ಲಿ 2.76 ಲಕ್ಷ ಹುದ್ದೆ ಖಾಲಿ, 4673 ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ

BIG NEWS: ರಾಜ್ಯದಲ್ಲಿ 2.76 ಲಕ್ಷ ಹುದ್ದೆ ಖಾಲಿ, 4673 ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಟ್ಟು 2.73 ಲಕ್ಷ ಹುದ್ದೆಗಳು ಖಾಲಿ ಉಳಿದಿರುವುದಾಗಿ ಹೇಳಲಾಗಿದೆ. 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ.

ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಲಾಗಿದೆ.

ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 26,168, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು ಖಾಲಿ ಉಳಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ವಿವಿಧ ಇಲಾಖೆಗಳ ವಿವಿಧ ವೃಂದಗಳ ಒಟ್ಟಾರೆ 4673 ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರೊಬ್ಬರು ಕೇಳಿದ ಪ್ರಶ್ನೆಗೆ ಸದನಕ್ಕೆ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular