HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ವಸತಿ ಕಾಲೇಜುಗಳಲ್ಲಿ JEE, NEET ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ...

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ವಸತಿ ಕಾಲೇಜುಗಳಲ್ಲಿ JEE, NEET ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ: ಸಚಿವ ಮಹದೇವಪ್ಪ ಘೋಷಣೆ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸರ್ಕಾರಿ ವಸತಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡಿದ್ದಾರೆ. ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್​​ಇಇಟಿ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಮಾಜಕಲ್ಯಾಣ ಸಚಿವ ಹೆಚ್​​ಸಿ ಮಹದೇವಪ್ಪ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಹದೇವಪ್ಪ, ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಹಳ್ಳಿ ಮಕ್ಕಳು ಹೆಚ್ಚು ಪಾಸಾಗಿದ್ದಾರೆ, ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚು ಸಾಧನೆ ಮಾಡಿದ್ದಾರೆ. ಇದು ಬಹಳ ಸಂತೋಷ. ವಸತಿ ಶಾಲೆಗಳಲ್ಲಿ ಈ ಬಾರಿ ಹೆಚ್ಚಿನ ರಿಸಲ್ಟ್ ಬಂದಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 539 ಎಸ್​ಸಿ, 156 ಎಸ್​ಟಿ ಮತ್ತು 179 ಹಿಂದುಳಿದ ವರ್ಗಗಳ ವಸತಿ ಶಾಲೆಗಳಿವೆ. ವಿಜ್ಞಾನ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತ್ ಭೀಮಪ್ಪ 598 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ವಸತಿ ಶಾಲೆಗಳಲ್ಲಿ ಓದಿದ 2,321 ಮಕ್ಕಳು ಡಿಸ್ಟಿಂಕ್ಷನ್​, 2487 ವಿದ್ಯಾರ್ಥಿಗಳು ಫಸ್ಟ್​​ ಕ್ಲಾಸ್​​ನಲ್ಲಿ ಪಾಸ್​ ಆಗಿದ್ದಾರೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್​​ಇಇಟಿ, ನೀಟ್ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular