SBI, ಪಂಜಾಬ್ ನ್ಯಾಷನಲ್ ಬ್ಯಾಂಕ್ ಠೇವಣಿ ನಿರ್ಬಂಧಕ್ಕೆ ಸರ್ಕಾರದಿಂದ ತಾತ್ಕಾಲಿಕ ತಡೆ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕುಗಳ ಮನವಿ ಹಿನ್ನೆಲೆಯಲ್ಲಿ ಈ ಬ್ಯಾಂಕುಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳು, ಸಂಸ್ಥೆಗಳು ಹೊಂದಿದ್ದ ಖಾತೆ ಕ್ಲೋಸ್ ಮಾಡುವ ಮತ್ತು ಠೇವಣಿ ಹೂಡಿಕೆ ಹಿಂಪಡೆಯುವ ಬಗ್ಗೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಈ ಕುರಿತಾಗಿ ಆರ್ಥಿಕ ಇಲಾಖೆಯ(ಆಯವ್ಯಯ ಮತ್ತು ಸಂಪನ್ಮೂಲ) ಕಾರ್ಯದರ್ಶಿ ಪಿ.ಸಿ. ಜಾಫರ್ ಶುಕ್ರವಾರ ಮತ್ತೊಂದು ಸುತ್ತೋಲೆ ಹೊರಡಿಸಿದ್ದಾರೆ.

ಈ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಆರೋಪಗಳ ಹಿನ್ನಲೆಯಲ್ಲಿ ನಿರ್ಬಂಧ ವಿಧಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read