HomeKarnatakaರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ

ರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರಸಕ್ತ ಸಾಲಿನ ಟೆಕ್ನಿಕಲ್ ಅಸಿಸ್ಟೆಡ್ ಲರ್ನಿಂಗ್ ಪ್ರೋಗ್ರಾಮ್ ಅಡಿ ರಾಜ್ಯದ 31 ಜಿಲ್ಲೆಗಳ ಆಯ್ದ 178 ಸರ್ಕಾರಿ ಪ್ರೌಢಶಾಲೆಗಳಲ್ಲಿ ಮಾದರಿ ಕಂಪ್ಯೂಟರ್ ಲ್ಯಾಬ್ ಗಳ ಸ್ಥಾಪನೆಗೆ ಮುಂದಾಗಿದೆ.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳು ಇರುವ ಪ್ರತ್ಯೇಕ ಕೊಠಡಿ ಹೊಂದಿರುವ ಮತ್ತು ಕಂಪ್ಯೂಟರ್ ಲ್ಯಾಬ್ ಇಲ್ಲದ ಸರ್ಕಾರಿ ಪ್ರೌಢಶಾಲೆಗಳನ್ನು ಗುರುತಿಸಿ ಕೂಡಲೇ ಪಟ್ಟಿ ಕಳುಹಿಸಿಕೊಡುವಂತೆ ಡಯಟ್ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಗಿದೆ.

ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಪೈಕಿ ಆಯ್ದ 23 ಜಿಲ್ಲೆಗಳಲ್ಲಿ ತಲಾ 6, ಎಂಟು ಜಿಲ್ಲೆಗಳಲ್ಲಿ ತಲಾ 5 ಶಾಲೆಗಳನ್ನು ಆಯ್ಕೆ ಮಾಡುವಂತೆ ಸೂಚಿಸಲಾಗಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಕೊಪ್ಪಳ, ಕೋಲಾರ, ಮೈಸೂರು, ಶಿವಮೊಗ್ಗ, ಶಿರಸಿ, ತುಮಕೂರು, ಉಡುಪಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ತಲಾ ಆರು ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಮಂಜೂರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ, ಕಲಬುರಗಿ, ಬೀದರ್, ರಾಯಚೂರು, ಮಧುಗಿರಿ, ಕೊಡಗು, ಉತ್ತರ ಕನ್ನಡ, ವಿಜಯನಗರ, ಜಿಲ್ಲೆಗಳಿಗೆ ತಲಾ 5 ಶಾಲೆಗಳಿಗೆ ಕಂಪ್ಯೂಟರ್ ಮಂಜೂರು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular