HomeKarnatakaರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ, 5,000 ಶಿಕ್ಷಕರ ನೇಮಕಾತಿ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ, 5,000 ಶಿಕ್ಷಕರ ನೇಮಕಾತಿ

ಬೆಂಗಳೂರು: ಕಲ್ಯಾಣ ಕರ್ನಾಟಕದ ಸಾವಿರ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಿಸಿದ್ದು, ಮುಂದೆ ಆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನನಲ್ಲಿ ಆಯೋಜಿಸಿದ ಸಮತ್ವ ಸಿಎಸ್ಆರ್ ಶಿಕ್ಷಣ ಸಮಾವೇಶದಲ್ಲಿ ಅವರು ಮಾತನಾಡಿ, ಎಲ್ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಕಲ್ಪಿಸುವ ಗುರಿಯೊಂದಿಗೆ ಸಿಎಸ್ಆರ್ ನಿಧಿ ಬಳಕೆ ಮಾಡಿಕೊಂಡು ಶಾಲೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆಯಿದ್ದು, 45,000 ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದ್ದು, ಶೀಘ್ರದಲ್ಲಿ 5000 ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದಿಂದ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಉಚಿತವಾಗಿ ನೀಡಲಾಗುತ್ತಿದೆ. ಅಜೀಂ ಪ್ರೇಂ ಜೀ ಫೌಂಡೇಶನ್ 1,500 ಕೋಟಿ ರೂ. ವೆಚ್ಚದಲ್ಲಿ ಮಕ್ಕಳಿಗೆ ಮೊಟ್ಟೆ ಕೊಡಲು ಒಪ್ಪಂದವಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular