‘ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು’ : ಮಾಜಿ ಸಿಎಂ HDK ಆಗ್ರಹ

ಬೆಂಗಳೂರು : ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಮಾಜಿ ಸಿಎಂ ಹೆಚ್ಡಿಕೆ,  ‘ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರಕಾರ ನೀರು ಹರಿಸಬಾರದು’ ಎಂದಿದ್ದಾರೆ.

ಸಂಕಷ್ಟಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು!! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ ಎಂದಿದ್ದಾರೆ.

ಸಮಿತಿ & ಪ್ರಾಧಿಕಾರದ ಸಭೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ. ಆ ಸಭೆಗಳಿಗೆ ಅಧಿಕಾರಿಗಳು ಆನ್ʼಲೈನ್ʼನಲ್ಲಿ ಹಾಜರಾದರೆ, ನೆರೆರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ಹೀಗಾದರೆ, ರಾಜ್ಯದ ಹಿತರಕ್ಷಣೆ ಹೇಗೆ ಸಾಧ್ಯ? ನೆಲ,ಜಲ,ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ.ಇದು ದುರಂತ ಎಂದಿದ್ದಾರೆ.

ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು. ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ? ನೀರಾವರಿ ಪ್ರದೇಶವನ್ನು ನೆರೆರಾಜ್ಯ ಅಕ್ರಮವಾಗಿ ವಿಸ್ತರಣೆ ಮಾಡಿಕೊಂಡಿರುವುದನ್ನು ಹೇಳಲೇಬೇಕಿತ್ತು. ಮೊದಲು ಸಂಕಷ್ಟಸೂತ್ರ ರೂಪಿಸಿ ಎಂದು ಪಟ್ಟು ಹಿಡಿಯಬೇಕಿತ್ತು. ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ? ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಅವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ? ಎಂದು ಪ್ರಶ್ನಿಸಿದ್ದಾರೆ. ನಮ್ಮ ರೈತರಿಗೇ ನೀರಿಲ್ಲದಿದ್ದರೂ, ಅವರು ಬೆಳೆಯನ್ನೇ ಬೆಳೆಯದಿದ್ದರೂ ನೀರು ಬಿಡಲು ಸರಕಾರ ಒಪ್ಪಿದೆ. ಈ ವಿಷಯದಲ್ಲಿ ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ. ರೈತರ ತಾಳ್ಮೆಯನ್ನೂ ದುರುಪಯೋಗ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಏನು ಹೇಳುತ್ತದೋ ಅಲ್ಲಿಯವರೆಗೆ ಕಾಯಬೇಕಿತ್ತು. ಪ್ರಾಧಿಕಾರ, ಸಮಿತಿ ಹೇಳಿದವೆಂದು ನೀರು ಬಿಟ್ಟಿದ್ದು ತಪ್ಪು ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.

https://twitter.com/hd_kumaraswamy/status/1701803731153793076

 

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read