BIG BREAKING: ಲೋಕಸಭೆ ಚುನಾವಣೆಗೂ ಮುನ್ನ ದೇಶದ ಜನತೆಗೆ ಮೋದಿ ಸರ್ಕಾರ ಗಿಫ್ಟ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಲೀಟರ್‌ ಗೆ 2 ರೂ. ಕಡಿತ

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 2 ರೂ. ಕಡಿಮೆ ಮಾಡುವ ಮೂಲಕ ಭಾರತೀಯರ ಕುಟುಂಬದ ಕಲ್ಯಾಣ ಯಾವಾಗಲೂ ಅವರ ಗುರಿ ಎಂದು ದೇಶದ ಯಶಸ್ವಿ ಪ್ರಧಾನಿ ನರೇಂದ್ರ ಮೋದಿ ಕೋಟ್ಯಂತರ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್‌ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ(ಸಿಎನ್‌ಜಿ) ಬೆಲೆಗಳಲ್ಲಿ ಇತ್ತೀಚಿನ ಕಡಿತಗೊಳಿಸಲಾಗಿತ್ತು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲದ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಬೆಲೆ ಇಳಿಕೆಯು, ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಅಡುಗೆ ಇಂಧನವಾಗಿ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ.

https://twitter.com/HardeepSPuri/status/1768304332112601299

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read