ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ದೇಶಾದ್ಯಂತ 2000 ಕೃಷಿ ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ಆರಂಭ

ನವದೆಹಲಿ: ದೇಶಾದ್ಯಂತ 2000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಸಹಕಾರ ಸಚಿವಾಲಯ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ ಜನೌಷಧಿ ಕೇಂದ್ರ ಆರಂಭಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಒಂದು ಸಾವಿರ ಜನೌಷಧಿ ಕೇಂದ್ರಗಳನ್ನು ಆಗಸ್ಟ್ ವೇಳೆಗೆ ಆರಂಭಿಸಲಾಗುವುದು. ಡಿಸೆಂಬರ್ ವೇಳೆಗೆ ಉಳಿದ ಜನೌಷಧಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಹಕಾರ ಸಚಿವಾಲಯ ತಿಳಿಸಿದೆ.

ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ತೆರೆಯುವುದರಿಂದ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳ ಆದಾಯ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿ ಆಗಲಿದ್ದು, ಗ್ರಾಮೀಣ ಪ್ರದೇಶದಲ್ಲಿ ಜನತೆಗೆ ಕೈಗೆಟುಕುವ ದರದಲ್ಲಿ ಔಷಧಗಳು ಲಭ್ಯವಾಗಲಿವೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read