HomeIndiaವಿದೇಶದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರ ಸ್ಥಳಾಂತರಕ್ಕೆ ಇ-ಕೇರ್ ಪೋರ್ಟಲ್ ಪ್ರಾರಂಭ

ವಿದೇಶದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರ ಸ್ಥಳಾಂತರಕ್ಕೆ ಇ-ಕೇರ್ ಪೋರ್ಟಲ್ ಪ್ರಾರಂಭ

ನವದೆಹಲಿ: ವಿದೇಶದಲ್ಲಿ ಮೃತಪಟ್ಟ ಭಾರತೀಯರ ಮೃತದೇಹಗಳನ್ನು ತ್ವರಿತವಾಗಿ ವರ್ಗಾಯಿಸಲು ಸರ್ಕಾರವು ಇ-ಕೇರ್(ಇ-ಕ್ಲಿಯರೆನ್ಸ್ ಫಾರ್ ಆಫ್ಟರ್ ಲೈಫ್ ರಿಮೈನ್ಸ್) ಪೋರ್ಟಲ್ ಅನ್ನು ಪ್ರಾರಂಭಿಸಲಿದೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾತನಾಡಿ, ಮೃತ ಮಾನವನ ಅವಶೇಷಗಳನ್ನು ಅಂತಾರಾಷ್ಟ್ರೀಯ ಗಡಿಯಲ್ಲಿ ಸಾಗಿಸುವಾಗ ವಿಳಂಬವಾಗುವುದನ್ನು ತಪ್ಪಿಸಲು ಪೋರ್ಟಲ್ ಅನ್ನು ಪರಿಚಯಿಸಲಾಗುತ್ತಿದೆ. ಈ ಪೋರ್ಟಲ್ ಮೂಲಕ ಇಮೇಲ್, ಎಸ್‌ಎಂಎಸ್ ಮತ್ತು ವಾಟ್ಸ್‌ಆ್ಯಪ್ ಮೂಲಕ ಕೇಂದ್ರೀಯ ಅಂತರಾಷ್ಟ್ರೀಯ ಆರೋಗ್ಯ ವಿಭಾಗ, ನೋಡಲ್ ಅಧಿಕಾರಿ, ಕನ್ಸೈನಿಗಳು ಮತ್ತು ವಿಮಾನಯಾನ ಸಂಸ್ಥೆಗಳಿಗೆ ಮಾಹಿತಿಯನ್ನು ಕಳುಹಿಸಲಾಗುವುದು ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೊತ್ತುಪಡಿಸಿದ ನೋಡಲ್ ಅಧಿಕಾರಿ 48 ಗಂಟೆಗಳ ಒಳಗೆ ಪರಿಶೀಲನೆ ನಡೆಸಿ ಅನುಮೋದನೆ ಪಡೆಯುತ್ತಾರೆ. ನೋಂದಣಿ ಸಂಖ್ಯೆಯ ಮೂಲಕ ಇ-ಕೇರ್ ಪೋರ್ಟಲ್‌ನಲ್ಲಿ ಅರ್ಜಿಯ ಸ್ಥಿತಿಯನ್ನು ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular