HomeKarnatakaಸೆಪ್ಟೆಂಬರ್ 14ರಂದು ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಸೆಪ್ಟೆಂಬರ್ 14ರಂದು ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡಿನೆಲ್ಲೆಡೆ ಹಬ್ಬದ ಸಿದ್ಧ ಜೀರಾಗಿ ಸಾಗುತ್ತಿದೆ. ಈ ನಡುವೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಗೌರಿ-ಗಣೇಶ ಹಬ್ಬದ ದಿನಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.

ಹಬ್ಬದ ಸಾಂದರ್ಭದಲ್ಲಿ ಚಿಕ್ಕಮಗಳೂರಿನ ಪ್ರಸಿದ್ಧ ಗಿರಿಧಾಮಗಳಿಗೆ ಭೇಟಿ ನೀಡಲು ಯೋಜಿಸುತ್ತಿರುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಬಾಬಾಬುಡನ್‌ಗಿರಿ ಭಾಗಗಳಿಗೆ ಸೆಪ್ಟೆಂಬರ್ 14ರಂದು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಚೌತಿ ಹಬ್ಬದ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆ ಮಠಗಳಿಗೆ ಹಣ್ಣು-ಕಾಯಿ ಮಾಡಿಸಲು ಮತ್ತು ಚೌತಿ ಕಾಯಿ ಒಡೆಯಲು ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಸಾಂಪ್ರದಾಯಿಕ ಆಚರಣೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.

ಹಬ್ಬದ ದಿನದಂದು ಪ್ರವಾಸಿಗರ ವಾಹನಗಳ ದಟ್ಟಣೆಯಿಂದ ತೀವ್ರ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿರುವುದರಿಂದ, ಸಾರ್ವಜನಿಕರ ಹಾಗೂ ಭಕ್ತರ ಅನುಕೂಲಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಭಾಗಗಳಿಗೆ ತೆರಳುವ ಪ್ರವಾಸಿಗರು ಸೆಪ್ಟೆಂಬರ್ 14ರ ತಮ್ಮ ಪ್ರವಾಸವನ್ನು ಮುಂದೂಡಬೇಕೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular