HomeKarnatakaವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಇತ್ತೀಚೆಗಷ್ಟೇ 7ನೇ ವೇತನ ಆಯೋಗ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸ್ತು ಎನ್ನುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಇದರ ಬೆನ್ನಲ್ಲೇ ಸರ್ಕಾರಿ ನೌಕರರು ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿ -ಜಿಪಿಎಫ್‌ ಗೆ ಜಮಾ ಮಾಡುವ ವಂತಿಗೆ ಮೊತ್ತವನ್ನು 5 ಲಕ್ಷ ರೂ.ಗೆ ಮಿತಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಸಾಮಾನ್ಯ ಭವಿಷ್ಯ ನಿಧಿಗೆ ಚಂದಾದಾರರು ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular