HomeKarnatakaಎಸ್ಎಸ್ಎಲ್ಸಿ ತೃತೀಯ ಭಾಷೆಗೆ ಅಂಕ ಬದಲಿಗೆ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್

ಎಸ್ಎಸ್ಎಲ್ಸಿ ತೃತೀಯ ಭಾಷೆಗೆ ಅಂಕ ಬದಲಿಗೆ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್

ಬೆಂಗಳೂರು: ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಪ್ರಸ್ತಾಪ ವಿರೋಧಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಬೆಂಗಳೂರಿನ ಹೆಚ್.ಎನ್. ವಂದನಾ ಮತ್ತು ಎಸ್. ವೆಂಕಟೇಶ್ ಪಿಐಎಲ್ ಸಲ್ಲಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಸಚಿವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಹಿಂದಿ ಭಾಷೆ ಸೇರಿದಂತೆ ತೃತೀಯ ಭಾಷೆಗಳು ಕಡ್ಡಾಯವಲ್ಲ. ಇವುಗಳಿಗೆ ಅಂಕಗಳ ಬದಲಿಗೆ ಗ್ರೇಡ್ ಗಳನ್ನಾಗಿ ಪರಿಗಣಿಸಲಾಗುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರ ಜಾರಿಗೆ ತರುವುದಾಗಿ ಹೇಳಿದ್ದಾರೆ. ಸಚಿವರು ಈ ನಿರ್ಧಾರ ಪ್ರಕಟಿಸುವ ಮೊದಲು ಸಾರ್ವಜನಿಕವಾಗಿ ಚರ್ಚೆ ನಡೆಸಿಲ್ಲ. ಸಂಪುಟದ ಅನುಮೋದನೆ ಪಡೆದುಕೊಂಡಿಲ್ಲ. ಅಲ್ಲದೇ, ಭಾಷಾ ತಜ್ಞರ ಸಲಹೆ ಪಡೆಯದೆ ಏಕಪಕ್ಷೀಯವಾಗಿ ತೀರ್ಮಾನ ಪ್ರಕಟಿಸಿದ್ದಾರೆ ಎಂದು ದೂರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಈ ರೀತಿ ಹೇಳಿಕೆಯಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಈ ಕುರಿತಂತೆ ಯಾವುದೇ ಅಧಿಕೃತ ಸರ್ಕಾರಿ ಆದೇಶ, ಅಧಿಸೂಚನೆ ಹೊರಬಂದಿಲ್ಲ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ನೀತಿ ಜಾರಿಗೆ ತರಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಮೇಲೆ ತಾರತಮ್ಯ ಮಾಡುವಂತಹ ಮತ್ತು ಗೊಂದಲ ಮೂಡಿಸುವಂತಹ ಇಂತಹ ನಿರ್ಧಾರವನ್ನು ರದ್ದುಪಡಿಸಬೇಕು. ನ್ಯಾಯಾಲಯ ಮಧ್ಯಪ್ರವೇಶಿಸಿ ಸಚಿವರು ನೀಡಿರುವ ಹೇಳಿಕೆ ಜಾರಿಗೆ ತಡೆ ನೀಡಬೇಕು ಎಂದು ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular