ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ನಾಳೆ ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಇದೇ ಅಕ್ಟೋಬರ್ 21 ರ ನಾಳೆ ನಡೆಯಲಿದೆ. 

 ಪದವೀಧರ ಪ್ರಾಥಮಿಕ ಶಿಕ್ಷಕರ (06 ರಿಂದ 08ನೇ ತರಗತಿ) ನೇಮಕಾತಿ 2022ರ ನೇಮಕಾತಿಗೆ ಸಂಬಂಧಿಸಿದಂತೆ 2023ರ ಮಾರ್ಚ್ 8ರಂದು ಪ್ರಕಟಿಸಲಾಗಿರುವ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‍ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅಕ್ಟೋಬರ್ 19ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.giv.in  ನಲ್ಲಿ ಪ್ರಕಟಿಸಲಾಗುತ್ತದೆ.

 ಈ ಪಟ್ಟಿಯಲ್ಲಿನ ಅಭ್ಯರ್ಥಿಗಳ ಕ್ರಮವಾಗಿ ಗಣಿತ & ವಿಜ್ಞಾನ, ಸಮಾಜ ವಿಜ್ಞಾನ, ಜೀವವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‍ನ್ನು ಇದೇ ಅಕ್ಟೋಬರ್ 21ರ ನಾಳೆ ಬೆಳಿಗ್ಗೆ 10.30 ರಿಂದ ಕೌನ್ಸಿಲಿಂಗ್ ಮುಗಿಯುವವರೆಗೆ ಇಲಾಖೆ ವೆಬ್ ಸೈಟ್‍ನಲ್ಲಿರುವಂತೆ 1:1 ಆಯ್ಕೆ ಪಟ್ಟಿಯಲ್ಲಿರುವ ಎಲ್ಲಾ ಅಭ್ಯರ್ಥಿಗಳಿಗೆ ನಡೆಸಲಾಗುವುದು.

ಅಭ್ಯರ್ಥಿಗಳು ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read