ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ (ಆಗ್ನೆಯ ಮತ್ತು ಪಶ್ಚಿಮ ) ನೋಂದಣಿ ದಿನಾಂಕವನ್ನು ವಿಸ್ತರಿಸಲಾಗಿದೆ.
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ದಿನಾಂಕ 06.11.2025 ರಂದು ಅಂತಿಮ ದಿನಾಂಕವಾಗಿರುತ್ತದೆ. ಸದರಿ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ, ಅಂತಹ ಅರ್ಹ ಮತದಾರರು ಹಕ್ಕು ಮತ್ತು ಆಕ್ಷೇಪಣೆ ಸಮಯದಲ್ಲಿ ಅಂದರೆ ದಿನಾಂಕ 25.11.2025 ರಿಂದ 10.12.2025 ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.
ಮುಂದುವರೆದು, ಚುನಾವಣೆ ಘೋಷಣೆಯಾದ ನಂತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕದಿಂದ 10 ದಿನ ಹಿಂದಿನ ದಿನಾಂಕದವರೆಗೆ ಅರ್ಹ ಮತದಾರರು ನೋಂದಣಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

