HomeKarnatakaರಾಜ್ಯದಲ್ಲಿ ಅತಿಥಿ ಉಪನ್ಯಾಸಕರ ‘ಪಾದಯಾತ್ರೆ’ ಆರಂಭ : ನಾಳೆ ಬೆಂಗಳೂರಲ್ಲಿ 'ಬೃಹತ್ ಸಮಾವೇಶ'

ರಾಜ್ಯದಲ್ಲಿ ಅತಿಥಿ ಉಪನ್ಯಾಸಕರ ‘ಪಾದಯಾತ್ರೆ’ ಆರಂಭ : ನಾಳೆ ಬೆಂಗಳೂರಲ್ಲಿ ‘ಬೃಹತ್ ಸಮಾವೇಶ’

ಬೆಂಗಳೂರು : ರಾಜ್ಯ ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆಗೆ ಜಗ್ಗದ ರಾಜ್ಯದ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದೆ.

ಜ.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಿ, ಅಲ್ಲಿ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರು ಬೃಹತ್ ಸಮಾವೇಶ ನಡೆಸಲಿದ್ದಾರೆ.

ಕಳೆದ 40ಕ್ಕೂ ಅಧಿಕ ದಿನಗಳಿಂದ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರುಗಳು ಪ್ರತಿಭಟನಾ ಧರಣಿ ನಡೆಸುತ್ತಿದ್ದೇವೆ. ಈಗ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದೇವೆ. 10-15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಭದ್ರತೆ ಕೊಡಿ ಎಂದು ಕೇಳುವುದು ನಮ್ಮ ಹಕ್ಕು. ಅದಕ್ಕಾಗಿ ಕಳೆದ ಒಂದು 39 ದಿನಗಳಿಂದ ತರಗತಿ ಬಹಿಷ್ಕರಿಸಿ ನಾವು ಮುಷ್ಕರ ನಡೆಸುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಸ್ಪಂದಿಸಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಹೇಳಿದ್ದಾರೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಒಂದು 39 ದಿನಗಳಿಂದ ತರಗತಿ ಬಹಿಷ್ಕರಿಸಿ ನಾವು ಮುಷ್ಕರ ನಡೆಸುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಸ್ಪಂದಿಸಿಲ್ಲ. ಹಾಗಾಗಿ ಪಾದಯಾತ್ರೆ ಮೂಲಕ ಹೋರಾಟ ತೀವ್ರಗೊಳಿಸಲು ನಾವು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ. ಸೇವೆ ಕಾಯಂಗೆ ಆಗ್ರಹಿಸಿ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular