HomeKarnatakaಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನ ನಿಗದಿ: ಕರಡು ಪ್ರಕಟಣೆಗೆ ಸಾರ್ವಜನಿಕರ ಆಕ್ಷೇಪಣೆ ಅವಧಿ ವಿಸ್ತರಣೆ

ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನ ನಿಗದಿ: ಕರಡು ಪ್ರಕಟಣೆಗೆ ಸಾರ್ವಜನಿಕರ ಆಕ್ಷೇಪಣೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ 2026ರ ಮೇ 08ರ ಸಂಜೆ 5:30ರವರೆಗೆ ವಿಸ್ತರಿಸಲಾಗಿದೆ.

ಸಾರ್ವಜನಿಕರು ಆನ್ ಲೈನ್ ಮೂಲಕ ತಮ್ಮ ಮನವಿಗಳನ್ನು https://rdpr.karnataka.gov.in/rdc/public/ ಈ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ, ಅಂಬೇಡ್ಕರ್‌ ವೀಧಿ, ಬೆಂಗಳೂರು-560001 ಇಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

31 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ, ಸ್ವೀಕರಿಸಿದ ಆಕ್ಷೇಪಣೆ/ಅಹವಾಲುಗಳ ಬಗ್ಗೆ ಅದಾಲತ್‌ ಈ ತಿಂಗಳ 12ರಿಂದ 15ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಗೇಟ್-ನಂ-2, 2ನೇ ಮಹಡಿ, ಬಹುಮಹಡಿಗಳ ಕಟ್ಟಡ, ಕೊಠಡಿ ಸಂಖ್ಯೆ-229 ಬೆಂಗಳೂರು-560001 ಇಲ್ಲಿ ನಡೆಯಲಿದೆ. ಅದಾಲತ್‌ನಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಆಧಾರ್ ಅಥವಾ ಗುರುತಿನ ಚೀಟಿ ಅಥವಾ ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಯಾವುದೇ ಗುರುತಿನ ಚೀಟಿಯ ಪ್ರತಿಯನ್ನು ತಮ್ಮೊಂದಿಗೆ ಕಡ್ಡಾಯವಾಗಿ ತರಬೇಕು ಎಂದು ಆಯೋಗ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular