HomeKarnatakaBIG NEWS : ರಾಜ್ಯದಲ್ಲಿ ಅಕ್ಟೋಬರ್–ನವೆಂಬರ್‌'ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ; ಸಚಿವ ಈಶ್ವರ್ ಖಂಡ್ರೆ

BIG NEWS : ರಾಜ್ಯದಲ್ಲಿ ಅಕ್ಟೋಬರ್–ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ; ಸಚಿವ ಈಶ್ವರ್ ಖಂಡ್ರೆ

ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅಕ್ಟೋಬರ್ ಒಳಗೆ ನಡೆಯಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ದಿಸೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರಾವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಸದ್ಯ ಆಡಳಿತಾಧಿಕಾರಿಗಳ ಮೂಲಕ ಸ್ಥಳೀಯ ಸಂಸ್ಥೆಗಳ ಆಡಳಿತ ನಡೆಸಲಾಗುತ್ತಿದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಿ ಚುನಾವಣೆ ನಡೆಸಲು ಸರ್ಕಾರ ಆಸಕ್ತಿ ಹೊಂದಿದೆ ಎಂದು ಸಚಿವರು ತಿಳಿಸಿದರು.ಅಕ್ಟೋಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಗುರಿ ಸರ್ಕಾರದ ಮುಂದಿದ್ದು, ಅಗತ್ಯ ಸಿದ್ಧತೆಗಳನ್ನು ಸಂಬಂಧಿತ ಇಲಾಖೆಗಳು ಕೈಗೊಂಡಿವೆ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಿಂದ ಗ್ರಾಮೀಣ ಭಾಗಗಳಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ವಿವಿಧ ರಾಜಕೀಯ ಪಕ್ಷಗಳು ಹಾಗೂ ಆಕಾಂಕ್ಷಿಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದಾರೆ. ಅಧಿಕೃತ ಚುನಾವಣಾ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular