ಕಲಬುರಗಿ: ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಪರಮಾನಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ರಂಜುಣಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪರಮಾನಂದ ಅಸ್ವಸ್ಥರಾಗಿದ್ದಾರೆ. ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಕೆಲವರ ಮಾತು ಕೇಳಿ ಪಿಡಿಒ ಕೆಲಸದಿಂದ ತೆಗೆದಿದ್ದಾರೆ. ಯಾವುದೇ ನೋಟಿಸ್ ನೀಡದೆ ಕೆಲಸದಿಂದ ತೆಗೆದಿದ್ದಾರೆ ಎಂದು ಆರೋಪಿಸಲಾಗಿದೆ. ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪರಮಾನಂದನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
