HomeKarnatakaBREAKING NEWS: ಹಾಡಹಗಲೇ ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಗುಂಡಿಟ್ಟು ಹತ್ಯೆ

BREAKING NEWS: ಹಾಡಹಗಲೇ ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಗುಂಡಿಟ್ಟು ಹತ್ಯೆ

ಕಲಬುರಗಿ: ಹಾಡಹಗಲೇ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಾನಾಪುರ ಬಳಿ ನಡೆದಿದೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ (50) ಹತ್ಯೆಯಾದ ದುರ್ದೈವಿ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವಿಶ್ವನಾಥ್ ಜಾಮದಾರ್ ಮೇಲೆ ಮೂರು ಬಾರಿ ಫೈರಿಂಗ್ ಮಾಡಿದ್ದಾರೆ. ಗುಂಡೇಟಿಗೆ ವಿಶ್ವನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪಡುಸಾವಳಿಯಿಂದ ಆಳಂದಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular