HomeKarnatakaಮಾಹಿತಿ ನೀಡಲು ವಿಳಂಬ ಮಾಡಿದ ಪಿಡಿಒ ಸೇರಿ ಗ್ರಾಪಂ ಅಧಿಕಾರಿಗಳಿಗೆ ತಲಾ 10 ಸಾವಿರ ರೂ....

ಮಾಹಿತಿ ನೀಡಲು ವಿಳಂಬ ಮಾಡಿದ ಪಿಡಿಒ ಸೇರಿ ಗ್ರಾಪಂ ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ದಂಡ

ಕೊಪ್ಪಳ: ಸಕಾಲಕ್ಕೆ ಮಾಹಿತಿ ನೀಡಿದೆ ನಿರ್ಲಕ್ಷ್ಯ ವಹಿಸಿದ ಒಬ್ಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಮೂವರು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಅವರು ತಲಾ 10,000 ರೂ. ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಮೇಲ್ಮನವಿದಾರರು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದೆ ಇರುವುದರಿಂದ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಸಲ್ಲಿಸಿದ ದ್ವೀತಿಯ ಮೇಲ್ಮವಿ ವಿಚಾರಣೆ ನಡೆಸಿದಾಗ ಮೇಲ್ಮನವಿದಾರರಿಗೆ ಮಾಹಿತಿ ನೀಡುವಂತೆ ಪ್ರತಿವಾದಿಗಳಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಕಾರ್ಯದರ್ಶಗಳಿಗೆ ಪೀಠ ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 18(3) ಎ,ಡಿ ರಡಿ ನಿರ್ದೇಶನ ನೀಡಿದೆ.

ತಪ್ಪಿದಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005ರ ಕಲಂ 20(1) ರಡಿ ದಂಡದ ಎಚ್ಚರಿಕೆ ನೀಡಿದರೂ ಪೀಠದ ಆದೇಶ ಪಾಲನೆ ಮಾಡದ ಕಾರಣ ಪ್ರತಿವಾದಿ ಅಧಿಕಾರಿಗಳಾದ ವಡಗೇರಾ ತಾಲ್ಲೂಕಿನ ತಡಬಿಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಯಂಕನಗೌಡ, ಗುಂಡಗುರ್ತಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮಲ್ಲಿಕಾರ್ಜುನ ನಾಯಕ್, ಯಾದಗಿರಿ ತಾಲ್ಲೂಕಿನ ಸೈದಾಪೂರ ಗ್ರಾಮ ಪಂಚಾಯತ್ ಕಾರ್ಯದರ್ಶಿ ಇಸ್ಮಾಯಿಲ್ ಇವರಿಗೆ ಹಾಗೂ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ತಾಡರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ದೊಡ್ಡಮನಿ ಅವರಿಗೆ ತಲಾ 10,000 ರೂ. ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದಲ್ಲಿ ಸೈದಾಪೂರ ಗ್ರಾಮ ಪಂಚಾಯತ ಕಾರ್ಯದರ್ಶಿ ಇಸ್ಮಾಯಿಲ್ ಅವರಿಗೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲಾ 10,000 ರೂ. ಸೇರಿ 20,000 ರೂ. ದಂಡ ವಿಧಿಸಿದೆ ಹಾಗೂ ಮೇಲ್ಮನವಿದಾರಿಗೆ ಮಾಹಿತಿ ನೀಡಲು ಮಾಡಿದ ವಿಳಂಬಕ್ಕಾಗಿ ಮೇಲ್ಮನವಿದಾರರಿಗೆ 3000 ರೂ. ಸಾವಿರ ಪರಿಹಾರ ನೀಡುವಂತೆ ತಡಬಿಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಯಂಕನಗೌಡ ಇವರಿಗೆ ಆದೇಶ ಮಾಡಲಾಗಿದೆ.

 ಒಟ್ಟು ಐದು ಪ್ರಕರಣಗಳಲ್ಲಿ ಪ್ರತಿವಾದಿಯವರಿಗೆ 50,000 ರೂ. ದಂಡ ವಿಧಿಸಿದ್ದು, ಸದರಿ ದಂಡ ಪಾವತಿ ಮಾಡಿ ಮುಂದಿನ ವಿಚಾರಣೆಗೆ ಹಾಜರಾಗಲು ಪುನಃ ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular