ಮಂಗಳೂರು: ಸುಳ್ಯ ತಾಲೂಕಿನ ಪಂಜ ಗ್ರಾಮ ಪಂಚಾಯಿತಿಯಲ್ಲಿ ಸಂಗ್ರಹವಾಗಿದ್ದ ತೆರಿಗೆ ಹಣ ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಪಿಡಿಒ ಜಯಂತ್, ಪ್ರಭಾರ ಕಾರ್ಯದರ್ಶಿ ಸೀತಾರಾಮ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿನಾಯಕ ನರವಾಡೆ ಆದೇಶಿಸಿದ್ದಾರೆ. ಪಂಜ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿ ಬಾಬು 13 ಲಕ್ಷ ರೂಪಾಯಿಗಿಂತ ಹೆಚ್ಚು ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಪೊಲೀಸ್ ದೂರು ನೀಡಲಾಗಿತ್ತು.
ಇದೀಗ ಪಂಚಾಯಿತಿಯ ಪಿಡಿಒ, ಪ್ರಭಾರ ಕಾರ್ಯದರ್ಶಿ ವಿರುದ್ಧ ತೆರಿಗೆ ಹಣ ದುರ್ಬಳಕೆ, ಕರ್ತವ್ಯ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದ್ದು, ಜಿಪಂ ಸಿಇಒ ಅಮಾನತು ಮಾಡಿದ್ದಾರೆ.

