BIG NEWS: ಕೈಗಾರಿಕೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಪಂಗಳಿಗೆ ಅಧಿಕಾರವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಕೈಗಾರಿಕೆಗಳಿಂದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹಿಸಲು ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(KIADB) ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರೆಗೆ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲವೆಂದು ಹೈಕೋರ್ಟ್ ಆದೇಶಿಸಿದೆ.

ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಹಲವಾರು ಇತರೆ ಕೈಗಾರಿಕಾ ಸಂಸ್ಥೆಗಳಿಗೆ ಸೋಂಪುರ ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದೆ. ಇದನ್ನು ಪ್ರಶ್ನಿಸಿ ಕಲ್ಪತರು ಬ್ರೀವರಿಸ್ ಮತ್ತು ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read