ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಗ್ರಾಪಂ ಗ್ರಂಥಪಾಲಕರು, ಮೇಲ್ವಿಚಾರಕರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳ ಗ್ರಂಥಪಾಲಕರು ಮತ್ತು ಮೇಲ್ವಿಚಾರಕರಿಗೆ ಕನಿಷ್ಠ ವೇತನ ಏರಿಕೆ ಮಾಡಲಾಗಿದೆ.

ಕನಿಷ್ಠ ವೇತನ ನಿಗದಿಪಡಿಸುವುದರೊಂದಿಗೆ ಇತರೆ ಭತ್ಯೆಗಳನ್ನು ನೀಡುವ ಮೂಲಕ ನೌಕರರ ಕುಟುಂಬಗಳಿಗೆ ಭದ್ರತೆ ಕಲ್ಪಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮೇಲ್ವಿಚಾರಕರ ಸಂಘ ಅಭಿನಂದಿಸಿದೆ.

ರಾಜ್ಯದ 5622 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ಧಾರವನ್ನು ಸಂಘ ಸ್ವಾಗತಿಸಿದೆ.

35 ವರ್ಷಗಳಿಂದ ನನಗೆ ಬಿದ್ದಿದ್ದ ಬೇಡಿಕೆಯನ್ನು ಈಡೇರಿಸಿ ಸಚಿವರು ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಂಥಪಾಲಕರು, ಮೇಲ್ವಿಚಾರಕರು, ಮತ್ತು ಅವರ ಕುಟುಂಬದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ರಾಜ್ಯ ಸರ್ಕಾರಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮೇಲ್ವಿಚಾರಕರ ನೌಕರರ ಸಂಘದ ಅಧ್ಯಕ್ಷ ಸದಾನಂದ ಪೂಜಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read