HomeKarnatakaBIG NEWS: ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ, ಜಾತಿ ನಿಂದನೆ: ಗ್ರಾಮ ಪಂಚಾಯತ್ ಸದಸ್ಯ ಅರೆಸ್ಟ್

BIG NEWS: ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ, ಜಾತಿ ನಿಂದನೆ: ಗ್ರಾಮ ಪಂಚಾಯತ್ ಸದಸ್ಯ ಅರೆಸ್ಟ್

ಚಿತ್ರದುರ್ಗ: ಸಿರಿಗೆರೆ ಗ್ರಾಮ ಪಂಚಾಯತ್ ಸದಸ್ಯನ ವಿರುದ್ಧ ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಸದಸ್ಯ ದೇವರಾಜ್ ಬಂಧಿತ ಆರೋಪಿ. ದೇವರಾಜ್, ಜಾತಿ ನಿಂದನೆ ಮಾಡುತ್ತಿದ್ದರು. ಅಲ್ಲದೇ ಗ್ರಾಮ ಪಂಚಾಯತ್ ಅಧ್ಯಕ್ಷಗೆ, ಪಿಡಿಓಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಪಂಚಾಯತಿ ಕ್ಲರ್ಕ್ ನೀಡಿದ ದೂರಿನ ಹಿನ್ನೆಲೆಯಲ್ಲಿ ದೇವರಾಜ್ ನನ್ನು ಪೊಲಿಸರು ಬಂಧಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular