ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಹೈಟೆಕ್ ಸರ್ಕಾರಿ ಶಾಲೆ

ಬೆಂಗಳೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಳ ಮಾಡಿ ಹೈಟೆಕ್ ಸ್ಪರ್ಶ ನೀಡಲು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ಪಬ್ಲಿಕ್ ಶಾಲೆ ಅಭಿವೃದ್ಧಿಪಡಿಸುವ ಪೈಲೆಟ್ ಪ್ರಾಜೆಕ್ಟ್ ರಾಮನಗರ ಜಿಲ್ಲೆಯಲ್ಲಿ ಆರಂಭವಾಗಲಿದೆ.

ಪ್ರಾಥಮಿಕ ಹಂತದಲ್ಲಿ ರಾಮನಗರ ಜಿಲ್ಲೆಯ ಐದು ತಾಲೂಕುಗಳ ವ್ಯಾಪ್ತಿಯಲ್ಲಿ 22 ಪಂಚಾಯಿತಿ ಕೇಂದ್ರದಲ್ಲಿ ಇಂತಹ ಶಾಲೆಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ದಪಡಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಯದಂತೆ ಗ್ರಾಮ ಪಂಚಾಯಿತಿಗೊಂದು ಹೈಟೆಕ್ ಸರ್ಕಾರಿ ಶಾಲೆ ನಿರ್ಮಿಸಲಾಗುವುದು. ಕಾರ್ಪೊರೇಟ್ ಕಂಪನಿಗಳ ಸಹಕಾರದೊಂದಿಗೆ ಮುಂದಿನ ಮೂರು ವರ್ಷದಲ್ಲಿ 2 ಸಾವಿರ ಸರ್ಕಾರಿ ಶಾಲೆಗಳನ್ನು ನಿರ್ಮಿಸಲಿದ್ದು, ಎರಡು ಅಥವಾ ಮೂರು ಪಂಚಾಯಿತಿಗೆ ಒಂದು ಅತ್ಯಾಧುನಿಕ ಗ್ರಾಮ ಪಂಚಾಯಿತಿ ಶಾಲೆಗಳನ್ನು ತೆರೆಯಲು ಯೋಜನೆ ರೂಪಿಸಲಾಗಿದೆ.

ಮಕ್ಕಳನ್ನು ಆಕರ್ಷಿಸಲು ಗ್ರಾಪಂ ಕೇಂದ್ರ ಸ್ಥಾನದಲ್ಲಿ ಕನಿಷ್ಠ ನಾಲ್ಕು ಎಕರೆ ಜಾಗದಲ್ಲಿ ಸೂಕ್ತ ಆಕರ್ಷಣೀಯ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಮಕ್ಕಳಿಗೆ ಸಾರಿಗೆ ವ್ಯವಸ್ಥೆ, ಆರೋಗ್ಯ ತಪಾಸಣೆ, ಹೆಣ್ಣು ಮಕ್ಕಳ ವಿಶ್ರಾಂತಿ ಕೊಠಡಿ, ಉತ್ತಮ ಶೌಚಾಲಯ, ಪ್ರಯೋಗಾಲಯ ಕ್ರೀಡಾಂಗಣ ಸೇರಿದಂತೆ ಎಲ್ಲಾ ತರಬೇತಿಗಳ ಹೈಟೆಕ್ ಶಾಲೆ ನಿರ್ಮಿಸಲಾಗುವುದು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ, ಮಕ್ಕಳ ಸರ್ವತೋಮುಖ ಅಭಿವೃದ್ಧಿ, ಶಾಲೆ ವಂಚಿತ ಮಕ್ಕಳ ಪ್ರಮಾಣ ಶೂನ್ಯಕ್ಕೆ ಇಳಿಕೆ, ಶಿಕ್ಷಕರ ಕೊರತೆ ಇರುವ ಶಾಲೆಗಳ ವಿಲೀನಗೊಳಿಸುವುದು ಸೇರಿದಂತೆ ಹಲವು ಉದ್ದೇಶಗಳನ್ನು ಇದು ಒಳಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read