HomeKarnatakaರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ 'ಸಿಸಿಟಿವಿ' ಅಳವಡಿಕೆ ಕಡ್ಡಾಯ ; ಸರ್ಕಾರ ಆದೇಶ

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ‘ಸಿಸಿಟಿವಿ’ ಅಳವಡಿಕೆ ಕಡ್ಡಾಯ ; ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಕಚೇರಿ ಚಟುವಟಿಕೆಗಳ ಮೇಲೆ ನಿಗಾ ಇಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚನೆ ನೀಡಿದೆ.

ದಿನಾಂಕ: 02.07.2016 ರಂದೇ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅನ್ವಯ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ನೀಡಲಾಗಿದೆ. ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ದಾಖಲೆಗಳ ಸುರಕ್ಷತೆ, ಸಿಬ್ಬಂದಿಯ ಕಾರ್ಯಕ್ಷಮತೆ ಹೆಚ್ಚಳ ಹಾಗೂ ಅಹಿತಕರ ಘಟನೆಗಳ ತಡೆ ಉದ್ದೇಶದಿಂದ ಸಿಸಿಟಿವಿ ಅಳವಡಿಸಲು ಸರ್ಕಾರ ನಿರ್ಧರಿಸಿದೆ.

ಯಾವೆಲ್ಲ ಕಡೆ ಸಿಸಿಟಿವಿ ಅಳವಡಿಸಬೇಕು?

ಗ್ರಾಮ ಪಂಚಾಯಿತಿ ಕಚೇರಿಯ ಕೆಳಗಿನ ಪ್ರಮುಖ ಸ್ಥಳಗಳು ಸಿಸಿಟಿವಿ ಕಣ್ಗಾವಲಿನಲ್ಲಿರಬೇಕು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಕಚೇರಿಯ ಮುಖ್ಯ ಗೇಟ್‌ – ಪ್ರವೇಶ ಮತ್ತು ನಿರ್ಗಮನ

  • ಪಡಸಾಲೆ ಹಾಗೂ ದಾಸ್ತಾನು ಕೊಠಡಿ

  • ಸಾರ್ವಜನಿಕ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸುವ ಸ್ಥಳ

  • ಸಾರ್ವಜನಿಕರೊಂದಿಗೆ ಕಚೇರಿ ವ್ಯವಹಾರ ನಡೆಯುವ ಸ್ಥಳ

  • ಸಭಾಂಗಣ

  • ಪಂಚಾಯಿತಿ ಕಟ್ಟಡದ ಪ್ರಮುಖ ಕೊಠಡಿಗಳು ಹಾಗೂ ಸ್ಥಳಗಳು

  • ಅಗತ್ಯವಿರುವ ಇತರೆ ಸ್ಥಳಗಳು

ಸಿಸಿಟಿವಿ ವ್ಯವಸ್ಥೆಗೆ ಹಲವು ಷರತ್ತು

ಸಿಸಿಟಿವಿ ಕ್ಯಾಮೆರಾಗಳು Static IP enabled ವ್ಯವಸ್ಥೆಯನ್ನು ಹೊಂದಿರಬೇಕು. ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಅಂತರ್ಜಾಲದ ಮೂಲಕ ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಲು ಸಾಧ್ಯವಾಗುವಂತಹ ತಂತ್ರಜ್ಞಾನವನ್ನು ಅಳವಡಿಸಬೇಕು.

ಖರೀದಿ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ 1999 ಹಾಗೂ ನಿಯಮಗಳು 2000ನ್ನು ಕಡ್ಡಾಯವಾಗಿ ಪಾಲಿಸಬೇಕು. ಕನಿಷ್ಠ ಮೂರು ವರ್ಷಗಳ ವಾರಂಟಿ ಹೊಂದಿರುವ ಹಾಗೂ ಸ್ಥಳೀಯವಾಗಿ ದುರಸ್ತಿ ಮಾಡಬಹುದಾದ ಕ್ಯಾಮೆರಾಗಳನ್ನು ಖರೀದಿಸಬೇಕು.

ಒಂದು ತಿಂಗಳ ದೃಶ್ಯಾವಳಿ ಸಂಗ್ರಹ

ಸಿಸಿಟಿವಿ ವ್ಯವಸ್ಥೆಯಲ್ಲಿ ಕನಿಷ್ಠ ಒಂದು ತಿಂಗಳ ಇಮೇಜ್/ವೀಡಿಯೋಗಳನ್ನು ಸಂಗ್ರಹಿಸುವ ಸಾಮರ್ಥ್ಯ ಇರಬೇಕು. ಅಗತ್ಯವಿದ್ದಲ್ಲಿ ವೀಡಿಯೋಗಳನ್ನು ಡಿವಿಡಿ ಅಥವಾ ಹಾರ್ಡ್ ಡ್ರೈವ್‌ನಲ್ಲಿ ಸಂಗ್ರಹಿಸುವ ವ್ಯವಸ್ಥೆಯೂ ಇರಬೇಕು.

ವಿದ್ಯುತ್ ವ್ಯತ್ಯಯವಾದರೂ ಸಿಸಿಟಿವಿ ಕಾರ್ಯನಿರ್ವಹಿಸುವಂತೆ ಯುಪಿಎಸ್ ಅಥವಾ ಸೋಲಾರ್ ಯುಪಿಎಸ್ ಮೂಲಕ ಬ್ಯಾಕ್‌ಅಪ್ ವ್ಯವಸ್ಥೆ ಕಲ್ಪಿಸಬೇಕು. ಕಚೇರಿ ಹೊರಭಾಗದಲ್ಲಿ ಅಳವಡಿಸುವ ಕ್ಯಾಮೆರಾಗಳು ಮಳೆ ಹಾಗೂ ಗಾಳಿಯಿಂದ ಹಾನಿಯಾಗದ, tamperproof ಮತ್ತು waterproof ಆಗಿರಬೇಕು.

ಸಿಬ್ಬಂದಿಗೆ ತರಬೇತಿ ಕಡ್ಡಾಯ

ಅಳವಡಿಸಿದ ಸಿಸಿಟಿವಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಬಳಕೆದಾರರ ದೃಢೀಕರಣದ ನಂತರವೇ ಪಾವತಿ ಮಾಡಬೇಕು. ಅಲ್ಲದೆ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ನೌಕರರಿಗೆ ಸಿಸಿಟಿವಿ ವ್ಯವಸ್ಥೆ ಬಳಸುವ ಕುರಿತು ಖರೀದಿಸಿದ ಸಂಸ್ಥೆಯಿಂದ ಕಡ್ಡಾಯವಾಗಿ ತರಬೇತಿ ನೀಡಬೇಕು.

ಈಗಾಗಲೇ ಸರ್ಕಾರದ ಸೂಚನೆಯಂತೆ ಸಿಸಿಟಿವಿ ಅಳವಡಿಸಿರುವ ಗ್ರಾಮ ಪಂಚಾಯಿತಿಗಳಲ್ಲಿ ಮತ್ತೆ ಅಳವಡಿಸುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಅಧಿಕಾರಿಗಳಿಗೆ ನೇರ ಉಸ್ತುವಾರಿ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಿಸಿಟಿವಿ ಅಳವಡಿಕೆ ಹಾಗೂ ಅವುಗಳ ಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ನೇರ ಉಸ್ತುವಾರಿ ವಹಿಸಬೇಕು.

ಸಿಸಿಟಿವಿ ಅಳವಡಿಕೆಯ ಕುರಿತು ಗ್ರಾಮ ಪಂಚಾಯಿತಿಗಳಿಂದ ವರದಿ ಪಡೆದು, ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಬೇಕು.

ಅಲ್ಲದೆ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಅಂತರ್ಜಾಲದ ಮೂಲಕ ಕಾಲಕಾಲಕ್ಕೆ ವೀಕ್ಷಿಸಿ ಮೇಲುಸ್ತುವಾರಿ ನಡೆಸುವಂತೆ ಸೂಚಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯಿತಿಗಳಲ್ಲಿ ಪಾರದರ್ಶಕತೆ ಹಾಗೂ ಉತ್ತಮ ಆಡಳಿತಕ್ಕೆ ಒತ್ತು ನೀಡಲು ಸರ್ಕಾರ ಮುಂದಾಗಿದೆ.

📄 Official Documents / Supporting Documents

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular