ಜ. 28 ರಂದು ಹೊಳಲೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯಕ್ಕೆ ಸಿದ್ದತೆ

ಶಿವಮೊಗ್ಗ: ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಜ.28 ರಂದು ತಾಲ್ಲೂಕಿನ ಹೊಳಲೂರು ಗ್ರಾಮದ ಮಾರುತಿ ಪ್ರೌಢಶಾಲೆಯ ಆವರಣದಲ್ಲಿ ಬೆಳಿಗ್ಗೆ 11 ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭವಾಗಲಿದೆ. ತಾಲ್ಲೂಕು ಕಚೇರಿ ವ್ಯಾಪ್ತಿಯ 41 ಇಲಾಖೆಗಳಿಗೆ ಈಗಾಗಲೇ ಸಿದ್ದತೆ ಕುರಿತು ಮಾಹಿತಿ ನೀಡಲಾಗಿದ್ದು, ಅವಶ್ಯಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರಿಗೆ ಸೂಕ್ತ ಆಸನ ವ್ಯವಸ್ಥೆ ಮಾಡಿ, ಆದೇಶಗಳ ಸುಗಮ ವಿತರಣೆಗೆ ಸೂಕ್ತ ಸಿದ್ದತೆ ಮಾಡಿಕೊಳ್ಳಬೇಕೆಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಪೂರ್ವಭಾವಿಯಾಗಿ ಚರ್ಚಿಸಲು ತಾಲ್ಲೂಕು ಕಚೇರಿಯಲ್ಲಿ ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಡಾ.ನಾಗರಾಜ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಎಲ್ಲ ಇಲಾಖೆಗಳು, ನಿಗಮಗಳು ತಮ್ಮ ತಮ್ಮ ವ್ಯಾಪ್ತಿಯ ಫಲಾನುಭವಿಗಳ ಪಟ್ಟಿ ತಯಾರಿಸಿ, ಕಾರ್ಯಕ್ರಮದ ಸಮರ್ಪಕ ಆಯೋಜನೆಗೆ ಸೂಕ್ತ ವ್ಯವಸ್ಥೆ ಮತ್ತು ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಅಂದು ಇಲಾಖೆಗಳಿಂದ ಲಭ್ಯವಾಗುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿತೆ ಒದಗಿಸುವ ವಿವಿಧ 14 ಮಳಿಗೆಗಳನ್ನು ತೆರೆಯಲು ಸೂಚನೆ ನೀಡಿರುವನ್ವಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read