HomeKarnatakaಅಜ್ಜನ ವೈಯಕ್ತಿಕ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಪಾಲು ಕೇಳಲು ಅವಕಾಶವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಅಜ್ಜನ ವೈಯಕ್ತಿಕ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಪಾಲು ಕೇಳಲು ಅವಕಾಶವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಜ್ಜ ತನ್ನ ಜೀವಿತಾವಧಿಯಲ್ಲಿ ಸ್ವಂತವಾಗಿ ಸಂಪಾದಿಸಿದ ಆಸ್ತಿಯು ವಿಭಜನೆಯ ನಂತರ ತಂದೆಯ ಕೈ ಸೇರಿದರೂ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆಯೇ ಹೊರತೂ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗುವುದಿಲ್ಲ. ಈ ರೀತಿ ವಿಭಜನೆಯಾದ ಆಸ್ತಿಯಲ್ಲಿ ಪಾಲು ಕೇಳಲು ಮೊಮ್ಮಗಳಿಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ಈ ಆದೇಶ ನೀಡಿದೆ ಅಮೆರಿಕದಲ್ಲಿ ನೆಲೆಸಿದ ಉಷಾ ಎನ್. ಸ್ವಾಮಿ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.

ಉಷಾ ಅವರು ಉಲ್ಲೇಖಿಸಿದ ಆಸ್ತಿಗಳನ್ನು ಆಕೆಯ ಅಜ್ಜ ಅಂದರೆ ತಂದೆಯ ತಂದೆ ಸ್ವಂತವಾಗಿ ಸಂಪಾದಿಸಿದ್ದರು ಎನ್ನುವುದು ದಾಖಲೆಗಳಿಂದ ತಿಳಿದು ಬಂದಿದೆ. ಈ ಆಸ್ತಿಯನ್ನು ಅವರ ತಾತಾ ಅವರ ಮಕ್ಕಳಿಗೆ ಕೌಟುಂಬಿಕ ಒಪ್ಪಂದದ ಮೂಲಕ ಆಸ್ತಿ ಹಂಚಿಕೆ ಮಾಡಿದ್ದಾರೆ. ಅಜ್ಜನ ಸ್ವಯಾರ್ಜಿತ ಆಸ್ತಿ ಭಾಗವಾಗಿ ತಂದೆಗೆ ಬಂದಾಗ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ. ಆದರೆ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಂದೆಗೆ ತನ್ನ ಸ್ವಯಾರ್ಜಿತ ಆಸ್ತಿಯನ್ನು ಯಾರಿಗಾದರೂ ವಿಲೇವಾರಿ ಮಾಡುವ ಸಂಪೂರ್ಣ ಹಕ್ಕು ಇರುತ್ತದೆ. ಈ ಆಸ್ತಿಗಳು ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಾಗಿದ್ದವು ಎಂಬುದನ್ನು ಸಾಬೀತುಪಡಿಸಲು ಮೇಲ್ಮನವಿದಾರರಾದ ಉಷಾ ಅವರು ಅಗತ್ಯ ಸಾಕ್ಷ್ಯಗಳನ್ನು ಒದಗಿಸಿಲ್ಲ. ತಾತನ ಸ್ವಯಂ ಸಂಪಾದಿತ ಆಸ್ತಿಗಳನ್ನು ಜಂಟಿ ಕುಟುಂಬದ ಆಸ್ತಿಗಳೆಂದು ಹೇಳಿ ತಾನು ಭಾಗ ಪಡೆಯಬಹುದು ಎಂದು ವಾದಿಸಲು ಸಾಧ್ಯವಿಲ್ಲ. ಆದ್ದರಿಂದ ಅವರಿಗೆ ಈ ಆಸ್ತಿಗಳಲ್ಲಿ ಯಾವುದೇ ಕಾನೂನಾತ್ಮಕ ಹಕ್ಕು ಇರುವುದಿಲ್ಲ ಎಂದು ನ್ಯಾಯ ಪೀಠ ತಿಳಿಸಿದೆ.

ಉಷಾ ಎನ್. ಸ್ವಾಮಿ 1979ರಲ್ಲಿ ವೈದ್ಯರಾದ ಜವರಯ್ಯ ಎನ್. ಸ್ವಾಮಿಯವರನ್ನು ಮದುವೆಯಾಗಿದ್ದು, ಪತಿಯೊಂದಿಗೆ ಅಮೆರಿಕದಲ್ಲಿ ವಾಸಿಸುತ್ತಿದ್ದರು. ಅವರ ಗಮನಕ್ಕೆ ಬಾರದೆ ಕುಟುಂಬಕ್ಕೆ ಸೇರಿದ 10 ಎಕರೆ ಜಮೀನನ್ನು ಪೋಷಕರು ಮಾರಾಟ ಮಾಡಿದ್ದಾರೆ. ತಂದೆಗೆ ಸೇರಿದ ಪಿತ್ರಾರ್ಜಿತ ಆಸ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಿ ಲಾಭ ಗಳಿಸಿದ್ದಾರೆ. ಈ ಲಾಭ ಅಂಶದ ಹಣದಲ್ಲಿ ಇತರೆ ಆಸ್ತಿಗಳನ್ನು ಗಳಿಸಿದ್ದಾರೆ. ಈ ಮೂಲ ಆಸ್ತಿಗಳು ಪೂರ್ವಜರಿಂದ ಬಂದ ಜಂಟಿ ಕುಟುಂಬದ ಆಸ್ತಿಗಳಾಗಿದ್ದು, ತಮಗೆ ಪಾಲು ಸಿಗಬೇಕು. ಈ ಎಲ್ಲಾ ಆಸ್ತಿಗಳು ಮತ್ತು ಬ್ಯಾಂಕ್ ಠೇವಣಿಯಲ್ಲಿಯೂ ತಾನು ಭಾಗ ಪಡೆಯಲು ಅಧಿಕಾರವಿದೆ. ಹೀಗಾಗಿ ಆಸ್ತಿಯಲ್ಲಿ ತನಗೆ ಭಾಗ ನೀಡಲು ನಿರ್ದೇಶನ ನೀಡಬೇಕು ಎಂದು ಅಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular