HomeLatest Newsಗುಟ್ಕಾ ತಿನ್ನಬೇಡ ಎಂದ ಅಜ್ಜಿ, ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗ

ಗುಟ್ಕಾ ತಿನ್ನಬೇಡ ಎಂದ ಅಜ್ಜಿ, ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗ

ಕಲಬುರಗಿ: ಗುಟ್ಕಾ ತಿನ್ನಬೇಡ ಎಂದು ಅಜ್ಜಿ ಬುದ್ಧಿವಾದ ಹೇಳಿದ್ದಕ್ಕೆ ಮೊಮ್ಮಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ರೋಹಿತ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. 9ನೇ ತರಗತಿ ಓದುತ್ತಿದ್ದ ರೋಹಿತ್ ಗುಟ್ಕಾ ತಿನ್ನುತ್ತಿದ್ದ. ಅಜ್ಜಿ ದಮಯಂತಿ ಏಳೆಂಟು ವರ್ಷಗಳಿಂದ ಮೊಮ್ಮಗನನ್ನು ಸಾಕಿ ಸಲಹಿ ಶಿಕ್ಷಣ ಕೊಡಿಸುತ್ತಿದ್ದರು. ಮೊಮ್ಮಗ ಗುಟ್ಕಾ ತಿನ್ನುವ ವಿಚಾರ ಆತನ ಸ್ನೇಹಿತರೆ ತಿಳಿದುಕೊಂಡ ಅಜ್ಜಿ, ಗುಟ್ಕಾ ತಿನ್ನಬೇಡ ಆರೋಗ್ಯ ಹಾಳಾಗುತ್ತದೆ ಎಂದು ಬುದ್ಧಿವಾದ ಹೇಳಿದ್ದಾರೆ.

ಅಜ್ಜಿ ಬುದ್ಧಿಮಾತು ಹೇಳಿದ್ದಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ರೋಹಿತ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular