ರಾಯಚೂರು: ಗ್ರ್ಯಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮಾಕಾಪುರದಲ್ಲಿ ನಡೆದಿದೆ.
ವೆಂಕಟೇಶ್ ಎಂಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಮೃತ ಕಾರ್ಮಿಕ ಬಾಗಲಕೋಟೆ ಜಿಲ್ಲೆಯ ಮೆಣಸಿಗೇರಿ ಮೂಲದವರು ಎನ್ನಲಾಗಿದೆ.
ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಗ್ರ್ಯಾನೈಟ್ ಗಣಿ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.