HomeKarnatakaಬೆಂಗಳೂರಲ್ಲಿ ರಾಜೀವ್ ಗಾಂಧಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ; ಡಿಸಿಎಂ ಡಿಕೆಶಿ

ಬೆಂಗಳೂರಲ್ಲಿ ರಾಜೀವ್ ಗಾಂಧಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ; ಡಿಸಿಎಂ ಡಿಕೆಶಿ

ಬೆಂಗಳೂರು : ಬೆಂಗಳೂರಿನಲ್ಲಿ   ರಾಜೀವ್ ಗಾಂಧಿ    ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ  ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದ ಡಿಸಿಎಂ ಡಿಕೆಶಿ ನಂತರ ಮಾತನಾಡಿದರು.

ರಾಜೀವ್ ಗಾಂಧಿ   ಅವರ ದೂರದೃಷ್ಟಿಯಿಂದಲೇ ಭಾರತದಲ್ಲಿ ತಂತ್ರಜ್ಞಾನದ ಕ್ರಾಂತಿ ಹಾಗೂ ಸ್ವಾವಲಂಬನೆಯ ಉದಯವಾಯಿತು. ಅವರ ದೂರದೃಷ್ಟಿ, ಮುಂದಾಲೋಚನೆ ಹಾಗೂ ದೇಶದ ಭವಿಷ್ಯದ ಬಗ್ಗೆ ಇದ್ದ ಅಪಾರವಾದ ನಂಬಿಕೆಯು ನನ್ನನ್ನೂ ಸೇರಿದಂತೆ ಅನೇಕರನ್ನು ಪ್ರೇರೇಪಿಸಿತು. ಅದೇ ಕಾರಣಕ್ಕೆ ನಾನು ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರಿನಲ್ಲಿ ರಾಜೀವ್ಗಾಂಧಿ ಅವರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ. ಅವರ ಆಲೋಚನೆಗಳು ಹಾಗೂ ದೂರದೃಷ್ಟಿಯು ಇಂದಿಗೂ ಕೂಡ ಅನೇಕರಿಗೆ ಸ್ಫೂರ್ತಿದಾಯಕವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular