ಬೆಂಗಳೂರು: ಸರ್ಕಾರಿ ಇಲಾಖೆಗಳು, ನಿಗಮ/ ಮಂಡಳಿಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರ ನಿಗದಿಪಡಿಸಿದ ಅರ್ಹತಾ ಮಾನದಂಡಗಳಿಗೆ ಈ ನೇಮಕಾತಿ ಬಳಪಟ್ಟಿದೆ. ವಿವಿಧ ಇಲಾಖೆ, ನಿಗಮ, ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ(http://kea.kar.nic.in) ಸೂಚಿಸಿರುವ ಲಿಂಕ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ ಅಥವಾ ತಿದ್ದುಪಡಿ ಮಾಡಲು ಅವಕಾಶ ಇರುವುದಿಲ್ಲ. ಮೊದಲ ಒಂದು ಹುದ್ದೆಯ ಅರ್ಜಿಗೆ ನಿಗದಿತ ಶುಲ್ಕ ಪಾವತಿಸಬೇಕು. ಹೆಚ್ಚುವರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಲ್ಲಿ ಆಯ್ಕೆ ಮಾಡಲದ ಪ್ರತಿ ಹೆಚ್ಚುವರಿ ಹುದ್ದೆಯ ಅರ್ಜಿಗೆ 100 ರೂಪಾಯಿ ಶುಲ್ಕ ಪಾವತಿಸಬೇಕು.
ಅಧಿಸೂಚನೆಯಲ್ಲಿ ತಿಳಿಸಿದ ಹುದ್ದೆಗಳ ಸಂಖ್ಯೆ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ಪ್ರಾಧಿಕಾರಗಳು, ಪರೀಕ್ಷಾ ದಿನಾಂಕಕ್ಕೆ ಮುಂಚಿತವಾಗಿ ಬದಲಾವಣೆ ಬಯಸಿದಲ್ಲಿ ಮಾತ್ರ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗುವುದು.
ಕೃಷಿ ಮಾರಾಟ ಇಲಾಖೆ 180, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 40, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ 63, ತಾಂತ್ರಿಕ ಶಿಕ್ಷಣ ಇಲಾಖೆ 50, ಸೇರಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ., ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ)ಯಲ್ಲಿನ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.