HomeLatest Newsಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆಯಲ್ಲಿ 11,127 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆಯಲ್ಲಿ 11,127 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಇರುವ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ 11,127 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಿದೆ. ಭಾರಿ ಸಂಖ್ಯೆಯಲ್ಲಿ ಹುದ್ದೆಗಳು ಇರುವುದರಿಂದ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್ ಅರ್ಜಿ ಆರಂಭ: ಮೇ 15, 2026 ರಿಂದ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 14, 2026.

ಅರ್ಹತೆ ಮತ್ತು ವಯೋಮಿತಿ:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 10ನೇ ತರಗತಿಯೊಂದಿಗೆ ಐಟಿಐ (ITI), ಅಥವಾ ಡಿಪ್ಲೊಮಾ, ಅಥವಾ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.
  • ವಯೋಮಿತಿ: ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷಗಳ ನಡುವೆ ಇರಬೇಕು (ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ).

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ (Computer Based Test) ಮತ್ತು ವೈದ್ಯಕೀಯ ಪರೀಕ್ಷೆಗಳ (Medical Test) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಯಾವೆಲ್ಲಾ ವಲಯಗಳಲ್ಲಿ ಅರ್ಜಿ ಸಲ್ಲಿಸಬಹುದು?

ಬೆಂಗಳೂರು ಸೇರಿದಂತೆ ಸಿಖಂದರಾಬಾದ್, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್‌ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಜಮ್ಮು ಮತ್ತು ಶ್ರೀನಗರ, ಕೋಲ್ಕತ್ತಾ, ಮಾಲ್ಡಾ, ಮುಂಬೈ, ಮುಜಾಫರ್‌ಪುರ್, ಪಾಟ್ನಾ, ಪ್ರಯಾಗ್‌ರಾಜ್, ರಾಂಚಿ, ಸಿಲಿಗುರಿ, ತಿರುವನಂತಪುರಂ ಮತ್ತು ಗೋರಖ್‌ಪುರ ಸೇರಿದಂತೆ ಒಟ್ಟು 21 ವಲಯಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹ ಅಭ್ಯರ್ಥಿಗಳು ಮೇ 15 ರಿಂದ ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular